ಮಂಗಳೂರು, ಮೇ 15 : ಮಾಜಿ ಪ್ರಧಾನಿಗಳು, ಜೆಡಿಎಸ್ ಪಕ್ಷದ ಹಿರಿಯ ನಾಯಕರು ಹಾಗೂ ದೇಶದ ರಾಜಕೀಯ ಕ್ಷೇತ್ರದ ಮಾರ್ಗದರ್ಶಕರಾದ H. D. Deve Gowda ಅವರ 94ನೇ ಜನ್ಮದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಜನತಾದಳ (ಜಾತ್ಯತೀತ) ಘಟಕದ ಜಿಲ್ಲಾಧ್ಯಕ್ಷರಾದ ಜಾಕೆ ಮಾಧವ ಗೌಡ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕಾರ್ಯಕ್ರಮದ ಅಂಗವಾಗಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಬಳಿಕ ಭಗಿನಿ ಸಮಾಜದ ಮಕ್ಕಳಿಗೆ ಸಿಹಿತಿಂಡಿ ವಿತರಣೆ ಕಾರ್ಯಕ್ರಮವೂ ಸೇರಿದಂತೆ ವಿವಿಧ ಸೇವಾ ಕಾರ್ಯಕ್ರಮ ನಡೆಯಲಿದೆ.
ರಕ್ತದಾನ ಶಿಬಿರವು 18ರಂದು ಸೋಮವಾರ ಬೆಳಿಗ್ಗೆ 10:30ಕ್ಕೆ ಮಂಗಳೂರಿನ Red Cross Blood Bank ನಲ್ಲಿ ಜಿಲ್ಲಾದ್ಯಕ್ಷರು ಮತ್ತು ಇತರ ನಾಯಕರು ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ. ಬಳಿಕ ಅಂದು ಸ್ವ ಇಚ್ಚೆಯಿಂದ ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ರಕ್ತದಾನ ಮಾಡಲಿದ್ದಾರೆ .
ಜೆಡಿಎಸ್ ಪಕ್ಷದ ಎಲ್ಲಾ ಕಾರ್ಯಕರ್ತರು, ವಿವಿಧ ಘಟಕಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

