ಬೆಳ್ತಂಗಡಿ:ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆ ಆಗಿದ್ದ ಯುವಕನ ಶವ ಇಂದು ಪತ್ತೆ ಆಗಿದೆ.
ಮುಂಡಾಜೆ ಗ್ರಾಮದ ಪರಮುಖ ಎಂಬಲ್ಲಿ ನಿನ್ನೆ ಸಂಜೆ ನೇತ್ರಾವತಿ ನದಿಗೆ ತನ್ನ ಸಹೋದರ ಸಂಬಂಧಿಯೊಂದಿಗೆ ಸ್ನಾನ ಮಾಡಲು ಪುತ್ತೂರು ಕಬಕ ನಿವಾಸಿ ಕಿರಣ್ ತೆರಳಿದ್ದ. ಆದರೆ ನೀರಲ್ಲಿ ಮುಳುಗಿ ನಾಪತ್ತೆ ಆಗಿದ್ದ.
ಈತ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿರುವ ತನ್ನ ಅಜ್ಜಿ ಮನೆಗೆ ಬಂದಾಗ ಈ ಘಟನೆ ನಡೆದಿದೆ.
ನಿನ್ನೆ ಸಂಜೆಯಿಂದ ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ತಡರಾತ್ರಿಯವರೆಗೂ ಕಾರ್ಯಾಚರಣೆ ನಡೆಸಿದರೂ ಯುವಕ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮತ್ತೆ ಹುಡುಕಾಡಿದಾಗ ದೇಹ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
©2021 Tulunada Surya | Developed by CuriousLabs