ಬೆಂಗಳೂರು : ನಗರದ ಪ್ರತಿಷ್ಠಿತ 6 ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಹಾಕಲಾಗಿದೆ. ಇದರಿಂದಾಗಿ ಶಾಲಾ ವಿದ್ಯಾರ್ಥಿಗಳು, ಸಿಬ್ಬಂದಿಗಳು, ಪೋಷಕರಲ್ಲಿ ಆತಂಕವನ್ನು ಉಂಟು ಮಾಡಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ಬೆಂಗಳೂರಿನ 6 ಶಾಲೆಗಳಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಒಡ್ಡಲಾಗಿದೆ.
ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.
ಮಹದೇವಪುರದ ಗೋಪಾಲನ್ ಇಂಟರ್ನ್ಯಾಷನಲ್ ಶಾಲೆ, ವರ್ತೂರು ಠಾಣಾ ವ್ಯಾಪ್ತಿಯ ಡೆಲ್ಲಿ ಪಬ್ಲಿಕ್ ಸ್ಕೂಲ್, ಮಾರತ್ತಹಳ್ಳಿ ಠಾಣಾ ವ್ಯಾಪ್ತಿಯ ನ್ಯೂ ಅಕಾಡೆಮಿ ಸ್ಕೂಲ್, ಹೆಣ್ಣೂರು ಠಾಣಾ ವ್ಯಾಪ್ತಿಯ ಸೇಂಟ್ ವಿನ್ಸೆಂಟ್ ಪೌಲ್ ಶಾಲೆ, ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್ ಸೇರಿದಂತೆ ಒಟ್ಟು 6 ಶಾಲೆಗಳಲ್ಲಿ ಬಾಂಬ್ ಬೆದರಿಕೆಯ ಇ-ಮೇಲ್ ನಿಂದಾಗಿ ಶಾಲೆಗಳಿಗೆ ಬಾಂಬ್ ನಿಷ್ಕ್ರೀಯ ದಳದ ಸಿಬ್ಬಂದಿ ಸೇರಿದಂತೆ ವಿವಿಧ ತಂಡವು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದೆ. ಇನ್ನೂ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.