ಬೆಂಗಳೂರು: ದೇವರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಗಂಗಾಧರ ಅಜ್ಜಯನ ಹೆಸರಿನಲ್ಲಿ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಬಳಿಕ, 8 ಮಂದಿ ಶಾಸಕರ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಹೀಗೆ ಸಿಎಂ, ಡಿಸಿಎಂ ಆಗಿ ಆಯ್ಕೆಯಾದಂತವರಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಭಿನಂದನೆ ತಿಳಿಸಿದ್ದಾರೆ.
ಈ ಕುರಿತಂತೆ ಇಂದು ಟ್ವಿಟ್ ಮಾಡಿರುವಂತ ಅವರು, ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿದ್ದರಾಮಯ್ಯ ಅವರು ಹಾಗೂ ಅವರ ಸಚಿವ ಸಂಪುಟ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ.