Saturday, April 20, 2024
spot_img
More

    Latest Posts

    ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ 5 ಕ್ಕಿಂತ ಕಡಿಮೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಬೊಮ್ಮಾಯಿ

    ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ 5 ಕ್ಕಿಂತ ಕಡಿಮೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಆನ್ಲೈನ್ ಮೂಲಕ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತು ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪಾಸಿಟಿವಿಟಿ ದರ ಶೇ 5ಕ್ಕಿಂತ ಕಡಿಮೆಗೊಳಿಸಬೇಕು ಎಂಬ ಷರತ್ತಿನೊಂದಿಗೆ ಜಿಲ್ಲೆಯನ್ನು ಸರ್ಕಾರ ಅನ್‌ಲಾಕ್ ಮಾಡಿದೆ.

    ಅನ್‌ಲಾಕ್ ಅವಧಿಯಲ್ಲಿ ಜನಜಂಗುಳಿ ಉಂಟಾಗದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರು ಮಾಸ್ಕ್ ಧರಿಸುವುದು, ಅಂತರ ಪಾಲಿಸುವುದು ಕಡ್ಡಾಯವಾಗಬೇಕು. ಪೊಲೀಸ್‌ ಇಲಾಖೆಯಿಂದ ಪರಿಶೀಲಿಸಬೇಕು ಎಂದು ಎಸ್‌ಪಿ ವಿಷ್ಣುವರ್ಧನ್ ಅವರಿಗೆ ಬೊಮ್ಮಾಯಿ ಸೂಚಿಸಿದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss