ಮಂಗಳೂರು: ಬೆಂಗ್ರೆಯಲ್ಲಿ ಲಂಗರು ಹಾಕಿದ್ದ 3ಕ್ಕೂ ಅಧಿಕ ಬೋಟ್ ಗಳು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿದೆ.
ಬೆಂಕಿಗೆ ಆಹುತಿಯಾದ ಬೋಟ್ ಗಳು ಲಕ್ಷದ್ವೀಪ ಮೂಲದ್ದು ಎನ್ನಲಾಗಿದೆ. ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದೆ. ಬೆಂಗರೆಯಲ್ಲಿ ಸಾಮಾನ್ಯವಾಗಿ ಹಲವು ಬೋಟ್ ಗಳು ಲಂಗರು ಹಾಕಿರುತ್ತವೆ.ಇಂದು ಮೊದಲು ಒಂದು ಬೋಟ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಸಮೀಪದ ಇತರ ಬೋಟ್ ಗೂ ಆ ಬೆಂಕಿ ಹರಡಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದೆ.