ಬಂಟ್ವಾಳ: ಬ್ರಹ್ಮರಕೊಟ್ಲು ಟೋಲ್ ಗೇಟ್ ನಲ್ಲಿ ಡ್ರೈವರ್ ಒಬ್ಬರ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಸಾರ್ವಜನಿಕರಲ್ಲಿ ತುಂಬಾ ಆತಂಕ ಉಂಟು ಮಾಡಿದೆ. ಸಾರ್ವಜನಿಕರಲ್ಲಿ ಉತ್ತಮ ನಡವಳಿಕೆಯಿಂದ ವ್ಯವಹಾರ ಮಾಡೋದು ಬಿಟ್ಟು ಗುಂಡಾಗಿರಿ ವರ್ತನೆ ತೋರುವುದು ಜನರಿಗೆ ಭಯಭೀತರನ್ನಾಗಿಸುವುದು ತಪ್ಪು . ಟೋಲ್ ಸಿಬ್ಬಂದಿಗಳು ಬಲವಂತವಾಗಿ ಹಣ ವಸೂಲಿ ಮಾಡುವ ವರ್ತನೆ ಸಮಾಜದಲ್ಲಿ ಯುವ ಜನರಲ್ಲಿ ಹಿಂಸಾತ್ಮಕ ಪ್ರವೃತ್ತಿ ಮೂಡಿಸಲು ಪ್ರಚೋದನೆ ನೀಡುತ್ತದೆ. ಇಂತಹ ಘಟನೆಗಳ ಕಡಿವಾಣಕ್ಕೆ ಕೂಡಲೇ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ತುಳುನಾಡ ರಕ್ಷಣಾ ವೇದಿಕೆ ಬಂಟ್ವಾಳ ತಾಲೂಕು ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ವಾಮದಪದವು ರವರು ತಿಳಿಸಿರುತ್ತಾರೆ.
ಇದೇ ರೀತಿಯಲ್ಲಿ ಮುಂದುವರಿದಲ್ಲಿ ಮುಂದಿನ ದಿನದಲ್ಲಿ ತುಳುನಾಡ ರಕ್ಷಣಾ ವೇದಿಕೆ ಕೇಂದ್ರಿಯ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರ ನೇತೃತ್ವದಲ್ಲಿ ಇತರ ಘಟಕಗಳ ಬೆಂಬಲದೊಂದಿಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತುಳುನಾಡ ರಕ್ಷಣಾ ವೇದಿಕೆ ಬಂಟ್ವಾಳ ತಾಲೂಕು ಘಟಕದ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.