ಉಡುಪಿ ಬ್ರಹ್ಮಾವರ, ಜೂನ್ 28: ತುಳುನಾಡಿನ ಆಚಾರ-ವಿಚಾರ, ಸಂಸ್ಕೃತಿ, ಭಾಷೆ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಂಘಟಿತ ಹೋರಾಟದ ಅಗತ್ಯವಿದೆ ಎಂದು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜಾ ಅಭಿಪ್ರಾಯಪಟ್ಟರು.

ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ, ಬ್ರಹ್ಮಾವರ ಘಟಕದ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವು ಭಾನುವಾರ ಬೆಳಿಗ್ಗೆ 10 ಗಂಟೆಗೆ ಆರೂರಿನ ಶ್ರೀ ಬಬ್ಬು ಸ್ವಾಮಿ ದೈವಸ್ಥಾನದ ಸಮೀಪದ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಅವರು ತುಳುನಾಡಿನ ಇತಿಹಾಸ, ಸಂಸ್ಕೃತಿ, ಸಂಪ್ರದಾಯ, ಹೋರಾಟದ ಉದ್ದೇಶ ಹಾಗೂ ಸಂಘಟನೆಯ ಕಾರ್ಯಚಟುವಟಿಕೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಬ್ರಹ್ಮಾವರ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ತುಳುನಾಡಿನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸೂರ್ಯ-ಚಂದ್ರರ ಶಾಲು ಹೊದಿಸಿ ನೂತನ ಪದಾಧಿಕಾರಿಗಳನ್ನು ಗೌರವಪೂರ್ವಕವಾಗಿ ಸ್ವಾಗತಿಸಿ ಅಭಿನಂದಿಸಲಾಯಿತು.
ಸಭೆಯಲ್ಲಿ ಬ್ರಹ್ಮಾವರ ಘಟಕದ ಗೌರವಾಧ್ಯಕ್ಷರಾಗಿ ಪ್ರದೀಪ್ (ದೀಪು ಅಣ್ಣ) ಚಾಂತಾರ್, ಅಧ್ಯಕ್ಷರಾಗಿ ಶರತ್ ರಾಜ್ ಆರೂರು, ಪ್ರಧಾನ ಕಾರ್ಯದರ್ಶಿಯಾಗಿ ಮಹೇಂದ್ರ ಆಚಾರ್ಯ ಹೆರಂಜೆ, ಉಪಾಧ್ಯಕ್ಷರಾಗಿ ನಿತಿನ್ ಶೆಟ್ಟಿ ಪೇತ್ರಿ, ಸಂಘಟನಾ ಕಾರ್ಯದರ್ಶಿಯಾಗಿ ವಿಜಯ ನಾಯ್ಕ್ ಆರೂರು, ಕೋಶಾಧಿಕಾರಿಯಾಗಿ ವಿಘ್ನೇಶ್ ನಾಯ್ಕ್ ಆರೂರು ಅವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ವಿಜಯ್ ಆರೂರು, ರವಿ ಆರೂರು, ರಾಕೇಶ್, ಸತ್ಯನಾರಾಯಣ ಹೇರೂರು, ಉಮೇಶ್ ಬಿರ್ತಿ, ಅಜಿತ್ ಕರ್ಜೆ, ವೈಶಾಲ್ ಬ್ರಹ್ಮಾವರ, ಶಶಾಂಕ್ ಹೇರೂರು, ಸುಶಾಂತ್ ಕೊಳಂಬೆ, ರಮೇಶ್, ಸಾಹಿರಾಜ್ ಶೆಟ್ಟಿ, ಪ್ರಕಾಶ್ ಹೇರೂರು, ಕೀರ್ತಿರಾಜ್ ಬ್ರಹ್ಮಾವರ ಹಾಗೂ ಗೋಪಾಲ್ ನಾಯ್ಕ್ ಆರೂರು ಸೇರಿದಂತೆ ಅನೇಕ ಸದಸ್ಯರು ಉಪಸ್ಥಿತರಿದ್ದು, ಸಂಘಟನೆಯನ್ನು ಗ್ರಾಮ ಮಟ್ಟದಲ್ಲಿ ಬಲಪಡಿಸುವ ಸಂಕಲ್ಪ ವ್ಯಕ್ತಪಡಿಸಿದರು.
ಸಭೆಯು ತುಳುನಾಡಿನ ಸಂಸ್ಕೃತಿ, ಭಾಷೆ ಹಾಗೂ ಪರಂಪರೆಯ ಸಂರಕ್ಷಣೆಗಾಗಿ ಸಂಘಟನೆಯ ಕಾರ್ಯಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸುವ ದೃಢ ನಿರ್ಧಾರದೊಂದಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿತು.







