ಮೈಸೂರು: ಮೈಸೂರಿನ ಪಟಾಕಿ ಮಳಿಗೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಮೈಸೂರಿನ ಹೆಬ್ಬಾಳ್ ಕೈಗಾರಿಕಾ ಬಡಾವಣೆಯಲ್ಲಿ ಘಟನೆ ನಡೆದಿದೆ. ಆಕಸ್ಮಿಕವಾಗಿ ಪಟಾಕಿ ಮಳಿಗೆಗೆ ಬೆಂಕಿ ತಗುಲಿದ್ದು, ಲಕ್ಷಾಂತರ ಮೌಲ್ಯದ ಪಟಾಕಿಗಳು ಬೆಂಕಿಗಾಹುತಿಯಾಗಿದೆ.
ಪರಿಣಾಮ ಬೆಂಕಿ ಅಕ್ಕ ಪಕ್ಕದ ಮಳಿಗೆಗಳಿಗೂ ಬೆಂಕಿ ವ್ಯಾಪಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಹೆಬ್ಬಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.