ಕಾರ್ಕಳ: ಯುವ ಬಂಟರ ಸಂಘ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಮೂಡಬಿದರೆ ಯುವ ಬಂಟರ ಸಂಘದ ತಂಡ ವಿವಿಧ ಕ್ರೀಡೆಗಳಲ್ಲಿ ಅತಿ ಹೆಚ್ಚು ಗೆಲುವು ಸಾಧಿಸೋ ಮೂಲಕ ಚಾಂಪಿಯನ್ಶಿಪ್ ತಂಡವಾಗಿ ಹೊರ ಹೊಮ್ಮಿದೆ.
ಇಂದು ನಡೆದ ಕ್ರೀಡಾಕೂಟದಲ್ಲಿ ಮೂಡಬಿದರೆ ಯುವ ಬಂಟರ ಸಂಘದ ತಂಡ, ವಾಲಿಬಾಲ್ ಪ್ರಥಮ, ತ್ರೋಬಾಲ್ ಪ್ರಥಮ, ನೃತ್ಯ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದು ಚಾಂಪಿಯನ್ಶಿಪ್ ತನ್ನದಾಗಿಸಿಕೊಂಡಿದೆ.
ಈ ಸಂದರ್ಭದಲ್ಲಿ ಯುವ ಬಂಟರ ಸಂಘದ ಅಧ್ಯಕ್ಷರಾದ ಜಯಕುಮಾರ್ ಶೆಟ್ಟಿ, ಗೌರವ ಸಲಹೆಗಾರರಾದ ಮನೋಜ್ ಕುಮಾರ್ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾದ ಸಂದೀಪ್ ಎಮ್ ಶೆಟ್ಟಿ, ಉಪಾಧ್ಯಕ್ಷರಾದ ರಮೇಶ್ ಶೆಟ್ಟಿ, ಸಂದೀಪ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಸುಧಾಕರ್ ಶೆಟ್ಟಿ, ಶೃತಿ ಶೆಟ್ಟಿ, ಸುಕುಮಾರ್ ಶೆಟ್ಟಿ, ಆದರ್ಶ ಶೆಟ್ಟಿ, ಸುಧೀರ್ ಶೆಟ್ಟಿ, ದೀಪಕ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.