Friday, December 1, 2023

ವಿಟ್ಲ: ಮಹಿಳೆಗೆ ಚಾಕು ತೋರಿಸಿ ಚಿನ್ನ ಕಳ್ಳತನಕ್ಕೆ ಯತ್ನಿಸಿ ಪರಾರಿ

ವಿಟ್ಲ: ಕುಳ ಗ್ರಾಮದ ನೀರಪಳಿಕೆಯಲ್ಲಿ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ಚಿನ್ನ ಲಪಟಾಯಿಸಲು ಯತ್ನಿಸಿದ ಘಟನೆ ನಡೆದಿದೆ. ನೀರಪಳಿಕೆ ಮಹಮ್ಮದ್ ಕುಂಞ ಅವರ ಮನೆಯವರು ಚಿಕಿತ್ಸೆಗಾಗಿ ಆಸ್ಪತ್ರೆಗೆ...
More

    Latest Posts

    ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

    ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ...

    ಡಿ.1 ರಂದು “ರಾಪಟ” ತುಳು ಸಿನೆಮಾ ಬಿಡುಗಡೆ

    ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಡಿ.1...

    ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತ ಲೋಕಾಯುಕ್ತ ಬಲೆಗೆ

    ಕುಂದಾಪುರ : ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಗುಮಾಸ್ತ ಬಿ.ಮಂಜುನಾಥ್ ಪೂಜಾರಿ ಲೋಕಾಯಕ್ತ...

    Bank Holidays : ಡಿಸೆಂಬರ್ ನಲ್ಲಿ 18 ದಿನಗಳು ಬ್ಯಾಂಕ್ ಗಳಿಗೆ ರಜೆ : ಇಲ್ಲಿದೆ ಫುಲ್ ಲಿಸ್ಟ್

    ತಿಂಗಳ ಆರಂಭದ ಮೊದಲು, ಬ್ಯಾಂಕುಗಳ ರಜಾದಿನಗಳ ಪಟ್ಟಿ ಹೊರಬರುತ್ತದೆ. ಈ ವರ್ಷದ ಕೊನೆಯ ತಿಂಗಳು ಡಿಸೆಂಬರ್ ನಲ್ಲಿ ಪ್ರಾರಂಭವಾಗಲಿದೆ ಮತ್ತು ಅದಕ್ಕೂ ಮೊದಲು ಬ್ಯಾಂಕ್ ರಜಾದಿನಗಳ ಪಟ್ಟಿ ಈಗಾಗಲೇ ಬಂದಿದೆ.

    ಉಡುಪಿ: ರಾತ್ರಿ 8 ರಿಂದ 11 ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ – ಜಿಲ್ಲಾಧಿಕಾರಿ

    ಉಡುಪಿ : ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿ ಹಸಿರು ಪಟಾಕಿ ಬಳಕೆಯೊಂದಿಗೆ ಆಚರಿಸಿ ಮಾಲಿನ್ಯ ನಿಯಂತ್ರಣಕ್ಕೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

    ಜಿಲ್ಲಾ ವ್ಯಾಪ್ತಿಯಲ್ಲಿ ಪಟಾಕಿಗಳ ಮಾರಾಟ ಮತ್ತು ನಿಯಂತ್ರಿಸುವ ಕುರಿತು ಮಾತನಾಡಿದ ಅವರು, ಈ ಬಾರಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶವಿದ್ದು, ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೇಟ್ ಮೇಲೆ ಹಸಿರು ಪಟಾಕಿಯ ಚಿಹ್ನೆಯಿದ್ದು, ಕ್ಯೂಆರ್ ಕೋಡ್ ಇರುವ ಪಟಾಕಿಗಳನ್ನೇ ಉಪಯೋಗಿಸಬೇಕು. ನವೆಂಬರ್ 12 ರಿಂದ 15 ರವರೆಗೆ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ಪಟಾಕಿಗಳನ್ನು ಬಳಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶ ಮಾಡಿರುತ್ತದೆ. ರಾತ್ರಿ 8 ರಿಂದ ರಾತ್ರಿ 11 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಲಾಗುವುದು.ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗೂ ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದAತೆ ಬಳಸಬೇಕು. ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಹಾಗೂ ನಿಷೇಧಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ಸುಡುಮದ್ದುಗಳನ್ನು ಸ್ಪೋಟಿಸುವಂತಿಲ್ಲ. ತಹಶೀಲ್ದಾರರು, ವೃತ್ತ ನಿರೀಕ್ಷಕರು, ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಿ, ಅಲ್ಲಿ ಹಸಿರು ಪಟಾಕಿಯಲ್ಲದೆ, ಇನ್ನಾವುದಾದರೂ ನಿಷೇದಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ, ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಂಡು ಸಂಬಂಧಿತ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ತಾತ್ಕಾಲಿಕ ಪಟಾಕಿ ಮಳಿಗೆ ತೆರೆಯುವ ಮಾಲೀಕರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಮಳಿಗೆಗಳನ್ನು ತೆರೆಯಬೇಕು. ಅನುಮತಿ ನೀಡುವಾಗ ಸೂಚಿಸಿರುವ ಷರತ್ತುಗಳನ್ನು ತಪ್ಪದೇ ಪಾಲಿಸಬೇಕು. 

    ಸಾರ್ವಜನಿಕರಿಗೆ ಹಾಗೂ ಮಕ್ಕಳಲ್ಲಿ ಅರಿವು ಮೂಡಿಸಲು ಪರಿಣಾಮಕಾರಿಯಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಪರಿಸರ ಸ್ನೇಹಿ ದೀಪಾವಳಿ ಹಬ್ಬದ ಕುರಿತು ಸಾರ್ವಜನಿಕ ಸ್ಥಳಗಳಾದ ಮೆಟ್ರೊ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಮಾಲ್ ಗಳಲ್ಲಿ ಕರಪತ್ರ/ ಭಿತ್ತಿಪತ್ರಗಳನ್ನು ಹಂಚುವ ಮೂಲಕ ಹಾಗೂ ಟಿ.ವಿ ಮತ್ತು ರೇಡಿಯೋಗಳಲ್ಲಿ ಪ್ರಚಾರ ಪಡಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಬೇಕು. ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇದಿತ ಪಟಾಕಿಗಳನ್ನು ಸಾಗಾಟ ಮಾಡುವ ನಿರೀಕ್ಷೆಯಿದ್ದು ದೀಪಾವಳಿ ಹಬ್ಬ ಮುಗಿಯುವವರೆಗೂ ಜಿಲ್ಲೆಯ ಎಲ್ಲಾ ಗಡಿಭಾಗಗಳ ಚೆಕ್ ಪೋಸ್ಟ್ಗಳನ್ನು ವಾಣಿಜ್ಯ ಇಲಾಖೆಯ ಅಧಿಕಾರಿಗಳು ತಪಾಸಣೆ ಮಾಡಿ,ನಿಷೇಧಿತ ಪಟಾಕಿಗಳು ಇದ್ದಲ್ಲಿ ಮುಟ್ಟುಗೋಲು ಹಾಕಿಕೊಳ್ಳಬೇಕು. ದೀಪಾವಳಿ ಸಮಯದಲ್ಲಿ ಉತ್ಪಾದನೆಯಾಗುವ ಘನತ್ಯಾಜ್ಯದ ವೈಜ್ಞಾನಿಕ ವಿಲೇವಾರಿಯ ಕುರಿತು ಸ್ಥಳೀಯ ಸಂಸ್ಥೆಗಳು ಕ್ರಮವಹಿಸಬೇಕು.

    Latest Posts

    ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

    ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ...

    ಡಿ.1 ರಂದು “ರಾಪಟ” ತುಳು ಸಿನೆಮಾ ಬಿಡುಗಡೆ

    ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಡಿ.1...

    ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತ ಲೋಕಾಯುಕ್ತ ಬಲೆಗೆ

    ಕುಂದಾಪುರ : ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಗುಮಾಸ್ತ ಬಿ.ಮಂಜುನಾಥ್ ಪೂಜಾರಿ ಲೋಕಾಯಕ್ತ...

    Bank Holidays : ಡಿಸೆಂಬರ್ ನಲ್ಲಿ 18 ದಿನಗಳು ಬ್ಯಾಂಕ್ ಗಳಿಗೆ ರಜೆ : ಇಲ್ಲಿದೆ ಫುಲ್ ಲಿಸ್ಟ್

    ತಿಂಗಳ ಆರಂಭದ ಮೊದಲು, ಬ್ಯಾಂಕುಗಳ ರಜಾದಿನಗಳ ಪಟ್ಟಿ ಹೊರಬರುತ್ತದೆ. ಈ ವರ್ಷದ ಕೊನೆಯ ತಿಂಗಳು ಡಿಸೆಂಬರ್ ನಲ್ಲಿ ಪ್ರಾರಂಭವಾಗಲಿದೆ ಮತ್ತು ಅದಕ್ಕೂ ಮೊದಲು ಬ್ಯಾಂಕ್ ರಜಾದಿನಗಳ ಪಟ್ಟಿ ಈಗಾಗಲೇ ಬಂದಿದೆ.

    Don't Miss

    ಮಂಗಳೂರು : ಮರಣ ಪ್ರಮಾಣ ದೃಢೀಕರಣಕ್ಕೆ 13 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ವಿಎ

    ಮಂಗಳೂರು : ಅಜ್ಜನ ಮರಣ ಪ್ರಮಾಣ ಪತ್ರದ ದೃಢೀಕರಣಕ್ಕೆ 13 ಸಾವಿರ ಲಂಚ ಕೇಳಿದ ಚೇಳ್ಯಾರು ಗ್ರಾಮದ ವಿಎ ಶ್ರೀ ವಿಜಿತ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ...

    ಮಂಗಳೂರು: ಎಮ್ಮೆಕೆರೆ ಕ್ರೀಡಾಂಗಣದ ಅಭಿವೃದ್ಧಿಗೆ ಶಂಕು ಸ್ಥಾಪನೆ

    ಮಂಗಳೂರು: ಎಮ್ಮೆಕೆರೆ ಕ್ರೀಡಾಂಗಣದ ಅಭಿವೃದ್ಧಿಗೆ ಶಂಕು ಸ್ಥಾಪನೆ ಬೆಳಗ್ಗೆ 11 ಗಂಟೆಗೆ ಎಮ್ಮೆಕೆರೆ ಮೈದಾನದಲ್ಲಿ ಜನ ಪ್ರತಿನಿಧಿಗಳ ಉಪಸ್ಥಿತಿಯೊಂದಿಗೆ ನಡೆದಿದೆ.

    ಬೆಳ್ತಂಗಡಿ: ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ – ಸವಾರ ಸಾವು

    ಬೆಳ್ತಂಗಡಿ: ಬೈಕ್ ನ ಸೈಡ್ ಸ್ಟ್ಯಾಂಡ್ ತೆಗೆಯದೆ ಬೈಕ್ ಚಲಾಯಿಸಿದ ಪರಿಣಾಮ ಬೈಕ್ ನಿಯಂತ್ರಣ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನಪ್ಪಿದ ಘಟನೆ ಬೆಳ್ತಂಗಡಿಯ ಉಜಿರೆಯಲ್ಲಿ ನಡೆದಿದ್ದು,...

    ಯಕ್ಷಾಂಗಣ ಸಪ್ತಾಹದಲ್ಲಿ ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಸಂಸ್ಮರಣೆ

    ಮಂಗಳೂರು: 'ಸಾಧನ ಶೀಲ ಕಲಾವಿದರ ಹೆಸರಿನೊಂದಿಗೆ ಅವರ ಮನೆತನದ ಅಥವಾ ಊರಿನ ಹೆಸರು ಸೇರಿಕೊಂಡಿರುತ್ತದೆ. ಇದು ಅಂಥವರ ಸಮಗ್ರ ಕುಟುಂಬಕ್ಕೆ ಸಲ್ಲುವ ಗೌರವ. ಬೆಟ್ಟಂಪಾಡಿ ಬಾಳಪ್ಪ ಶೆಟ್ಟರು ಈ ನಿಟ್ಟಿನಲ್ಲಿ...

    ಹಿರಿಯ ಕಲಾವಿದ ರಂಗ ನಿರ್ದೇಶಕ ತಮ್ಮಲಕ್ಷ್ಮಣ ಅವರಿಗೆ ತುಳುನಾಟಕ ಬ್ರಹ್ಮ ರಾಮ ಕಿರೋಡಿಯನ್ ಸಂಸ್ಮರಣೆ

    ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ದಿನಾಂಕ 25-11-2023ರ ಶನಿವಾರ ಸಂಜೆ 5 ಗಂಟೆ ಸಮಯದಲ್ಲಿ ಜರಗುವ ಯಕ್ಷಾಂಗಣ ಮಂಗಳೂರು’ ಇವರ ಸರಣಿ ಸಂಸ್ಕರಣ ಸಮಾರಂಭದಲ್ಲಿ ತುಳು...