ಕಾಸರಗೋಡು : KSRTC ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದ ಘಟನೆ ಇಂದು ಸಂಜೆ ಮಂಜೇಶ್ವರ ಸಮೀಪದ ಪೊಸೊಟ್ ನಲ್ಲಿ ನಡೆದಿದೆ. ಅಪಘಾತದಿಂದ 15 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೇರಳ ಮಲಬಾರ್ ಬಸ್ಸು ಪೊಸೋಟ್ ಪೆಟ್ರೋಲ್ ಪಂಪ್ ಬಳಿ ಪಲ್ಟಿ ಹೊಡೆದಿದೆ. ಬಸ್ಸಿನಲ್ಲಿ 40 ಕ್ಕೂಅಧಿಕ ಪ್ರಯಾಣಿಕರಿದ್ದರು. ಬಸ್ಸಿನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ನಾಗರಿಕರು, ಪೊಲೀಸರು ಹೊರತೆಗೆದು ಆಸ್ಪತ್ರೆಗೆ ತಲುಪಿಸಿದರು. 15 ಮಂದಿಯನ್ನು ವಿವಿಧ ಅಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.