Friday, March 29, 2024
spot_img
More

    Latest Posts

    ಉಡುಪಿ ಜಿಲ್ಲೆಯಲ್ಲಿ ಜುಲೈ 1ರಿಂದ ಬಸ್ ಸಂಚಾರ ಆರಂಭ

    ಉಡುಪಿ: ಜಿಲ್ಲೆಯಲ್ಲಿ ಜುಲೈ 1ರಿಂದ ಸರ್ವಿಸ್ ಮತ್ತು ಎಕ್‌ಸ್‌ ‌ಪ್ರೆಸ್ ಬಸ್‌ಗಳು ಕಾರ್ಯಾಚರಣೆ ಆರಂಭಿಸಲಿವೆ. ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಶಾಸಕ ಕೆ.ರಘುಪತಿ ಭಟ್ ಮತ್ತು ಜಿಲ್ಲಾಧಿಕಾರಿ ಜಿ. ಜಗದೀಶ್ ಅಧ್ಯಕ್ಷತೆಯಲ್ಲಿ ಖಾಸಗಿ ಬಸ್ ಮಾಲೀಕರೊಂದಿಗೆ ಸಭೆ ನಡೆಸಲಾಯಿತು.

    ಈ ವೇಳೆ ಬಸ್‌ ಸಂಚಾರ ಆರಂಭಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು. ಸಭೆಯ ಬಳಿಕ ಉಡುಪಿ ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, “ಜುಲೈ 1ರಿಂದ ಜಿಲ್ಲೆಯಲ್ಲಿ ಬಸ್ ಕಾರ್ಯಾಚರಣೆಯನ್ನು ಪ್ರಾರಂಭಿಸಲು ನಾವು ನಿರ್ಧರಿಸಿದ್ದೇವೆ.

    ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಲಾಗುವುದು. ಬಸ್‌ಗಳಲ್ಲಿ ಶೇ.50 ಪ್ರಯಾಣಿಕರಿಗೆ ಮಾತ್ರ ಪ್ರಯಾಣಿಸಲು ಅವಕಾಶ ಒದಗಿಸಲಾಗುವುದು. ಆದರೆ ಟಿಕೆಟ್ ಶುಲ್ಕವನ್ನು ಶೇ.25ರಷ್ಟು ಹೆಚ್ಚಿಸಲಾಗುವುದು” ಎಂದು ತಿಳಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss