Friday, July 19, 2024
spot_img
More

    Latest Posts

    ಬಂಟ್ವಾಳ: ನಿಯಂತ್ರಣ ತಪ್ಪಿ ತಡೆಗೋಡೆಗೆ ಢಿಕ್ಕಿಯಾದ ಕಾರು

    ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಚರಂಡಿ ಮೇಲೆ ಹತ್ತಿ ನಿಂತುಕೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಮಾಣಿ ಸಮೀಪದ ‌ಸೂರಿಕುಮೇರು ಎಂಬಲ್ಲಿ ನಡೆದಿದೆ.

    ‌‌ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಹೆದ್ದಾರಿ ಬದಿ ಗುಡ್ಡ ಜರಿದು ಬೀಳದಂತೆ ಕಟ್ಟಲಾದ ತಡೆಗೋಡೆಗೆ ಗುದ್ದಿ ಬಳಿಕ ಚರಂಡಿ ಮೇಲೆ ಹತ್ತಿ ನಿಂತುಕೊಂಡಿದೆ. ಘಟನೆಯಿಂದ ಕಾರು ಸಂಪೂರ್ಣ ಜಖಂಗೊಂಡಿದೆ.ಆದರೆ ಅದೃಷ್ಟವಶಾತ್ ಕಾರಿನೊಳಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ.ಗಾಯಗೊಂಡ ವ್ಯಕ್ತಿಗಳ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.ಚಾಲಕ ಸಹಿತ ಮೂವರು ಮಹಿಳೆಯರಿದ್ದು, ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss