Wednesday, February 28, 2024
spot_img
More

  Latest Posts

  ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಜೀವ ಬೆದರಿಕೆ ಕೇಸ್ : ಪ್ರಕರಣದ ತನಿಖೆಯನ್ನು `CID’ ಗೆ ವಹಿಸಿ ರಾಜ್ಯ ಸರ್ಕಾರ ಆದೇಶ

  ಬೆಂಗಳೂರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ತಡೆದು ಬೆದರಿಕೆ ಒಡ್ಡಿದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

  ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ತಡೆದು ಬೆದರಿಕೆ ಒಡ್ಡಿದ ಆರೋಪಿ ರಿಯಾಜ್ ನನ್ನು ಈಗಾಗಲೇ ಬಂಧಿಸಲಾಗಿದ್ದು, ಪ್ರಕರಣದ ಹಿಂದೆ ಯಾರ್ಯಾರಿದ್ದಾರೆ ಎಂಬ ಸತ್ಯ ಹೊರಬರಬೇಕು ಎಂಬ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ.

  ಕೆಲ ದಿನಗಳ ಹಿಂದೆ ಶಾಸಕ ಹರೀಶ್ ಪೂಂಜಾ ಕಾರನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಶಾಸಕರಿದ್ದ ಕಾರು ತಡೆದು ಆರೋಪಿ ರಿಯಾಜ್ ಅವಾಚ್ಯವಾಗಿ ನಿಂದನೆ ಮಾಡಿ ಬೆದರಿಕೆ ಹಾಕಿದ್ದ. ಈ ಹಿನ್ನೆಲೆಯಲ್ಲಿ ಶಾಸಕರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss