Monday, November 28, 2022

ಸಮಾಜದ ಎಲ್ಲಾ ವರ್ಗದ ಜನರಿಗೆ ನೆರವು : ಐಕಳ ಹರೀಶ್ ಶೆಟ್ಟಿ

ಮಂಗಳೂರು: ಬಂಟ ಸಮಾಜದ ಸಂಘಟನೆಯ ಮೂಲಕ ಇತರ ಸಮಾಜದ ವರ್ಗಕ್ಕೂ ಮುಕ್ತ ನೆರವು ನೀಡುವ ಮೂಲಕ ಸಮಾಜದಲ್ಲಿ ಮೇಲ್ಪಂಕ್ತಿಗೆ ಕಾರಣವಾಗಿರುವ ಒಕ್ಕೂಟಕ್ಕೆ ಸಮಾಜ ಬಾಂಧವರಿಂದ ನೀಡುತ್ತಿರುವ ಸ್ಪಂದನೆಯೇ ಮೂಲ ಕಾರಣವಾಗಿದೆ....
More

  Latest Posts

  ಮಂಗಳೂರು: ಪತ್ನಿಯ ಕೊಲೆಗೈದ ಪತಿಯ ಬಂಧನ

  ಬಜ್ಪೆ: ಮಹಿಳೆಯೋರ್ವರನ್ನು ದೊಣ್ಣೆಯಿಂದ ಹೊಡೆದು ಕೊಲೆ‌ಮಾಡಿದ ಘಟನೆ ಬಜ್ಪೆ ಪೋಲಿಸ್‌ ಠಾಣಾ ವ್ಯಾಪ್ತಿಯ ತೆಂಕಯೆಕ್ಕಾರು ದುರ್ಗಾನಗರ ಬಳಿ‌ ನಡೆದಿದೆ. ಸರಿತಾ(35)ಕೊಲೆಯಾದ ಮಹಿಳೆ.ಕುಡುಕನಾಗಿದ್ದ ಪತಿ ದುರ್ಗೇಶ್ ಸರಿತಾಗೆ...

  ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣ: ಕರಾವಳಿ ಜನರು ಸದಾ ಜಾಗೃತರಾಗಿರಬೇಕು – ಪೇಜಾವರ ಶ್ರೀ

  ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕರಾವಳಿ ಭಾಗದಲ್ಲಿ ಉಗ್ರ ಕೃತ್ಯಗಳು ಕುಕ್ಕರ್ ಬಾಂಬ್ ಸ್ಫೋಟದ ವೇಳೆ...

  ಉಪ್ಪಿನಂಗಡಿ: ಮಗಳನ್ನು ಮದುವೆ ಮಾಡಿ ಕೊಡಲು ನಿರಾಕರಿಸಿದ ಕಾರಣಕ್ಕೆ ತಂಡದಿಂದ ಹಲ್ಲೆ

  ಉಪ್ಪಿನಂಗಡಿ: ಮಗಳನ್ನು ತನಗೆ ಮದುವೆ ಮಾಡಿ ಕೊಡಲು ನಿರಾಕರಿಸಿದ ಎಂಬ ಕಾರಣಕ್ಕೆ ಆ ವ್ಯಕ್ತಿಯ ಮನೆಗೆ ಯುವಕನೋರ್ವ ತಂಡ ಕಟ್ಟಿಕೊಂಡು ನುಗ್ಗಿ ಮಾರಕಾಯುಧಗಳಿಂದ ಹಲ್ಲೆಗೈದು ಕೊಲೆಗೆ ಯತ್ನಿಸಿದ ಆರೋಪದಲ್ಲಿ ನಾಲ್ವರನ್ನು...

  ಕುಕ್ಕೆ ಸುಬ್ರಹ್ಮಣ್ಯದಲ್ಲಿ 2 ವರ್ಷಗಳ ಬಳಿಕ ನಡೆದ ಎಡೆಮಡೆಸ್ನಾನ ಸೇವೆ

  ಇತಿಹಾಸ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಆಚರಣೆ ನಡೆಯುತ್ತಿದ್ದು ಇದರ ಅಂಗವಾಗಿ ನಡೆಯುವ ಎಡೆಮಡೆಸ್ನಾನ ಬರೋಬ್ಬರಿ ಎರಡು ವರ್ಷಗಳ ಬಳಿಕ ಇಂದು ನಡೆದಿದೆ.

  BIGG NEWS : ಸರಕಾರಿ ‘ನೌಕರರಿಗೆ ಸಿಹಿ ಸುದ್ದಿ’: ಹೊಸ ವರ್ಷದಿಂದ ಎಲ್ಲಾ ‘ ಆಸ್ಪತ್ರೆಗಳಲ್ಲಿ ಕ್ಯಾಶ್‌ಲೆಸ್‌ ಚಿಕಿತ್ಸೆ

  ಬೆಂಗಳೂರು: ‘ರಾಜ್ಯ ಸರಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ಇನ್ನುಮುಂದೆ ರಾಜ್ಯದ ಆಸ್ಪತ್ರೆಗಳಲ್ಲಿ ನಗದು ರಹಿತ ವೈದ್ಯಕೀಯ ಸೇವೆ ಸಿಗಲಿದೆ.

  ಮಾರಣಾಂತಿಕ ಕಾಯಿಲೆಗಳೂ ಸೇರಿದಂತೆ 1,226 ಆರೋಗ್ಯ ಸಮಸ್ಯೆಗಳಿಗೆ ಮಲ್ಪಿ ಸ್ಪೆಷ್ಟಾಲಿಟಿ ಆಸ್ಪತ್ರೆ, ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿಶಸ್ತ್ರಚಿಕಿತ್ಸೆ ಒಳಗೊಂಡಂತೆ ಸಂಪೂರ್ಣ ನಗದುರಹಿತ ಚಿಕಿತ್ಸೆ ಸಿಗುವ ‘ಕರ್ನಾಟಕ ರಾಜ್ಯ ಸರಕಾರಿ ನೌಕರರ ಉಚಿತ ಆರೋಗ್ಯ ಯೋಜನೆ’ಗೆ ರಾಜ್ಯ ಸರಕಾರ ಅಂಗೀಕಾರ ನೀಡಿದೆ. ಹೊಸ ವರ್ಷದಿಂದ ಯೋಜನೆ ಜಾರಿಗೆ ಬರಲಿದೆ ‘ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಕ್ಷರಿ ಹೇಳಿದರು. ‘ರಾಜ್ಯ ಸರಕಾರದ 5.50 ಲಕ್ಷ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತರಿಗೆ ನಗದುರಹಿತ ಚಿಕಿತ್ಸಾ ವ್ಯವಸ್ಥೆ ಜನವರಿಯಲ್ಲಿ ಜಾರಿಯಾಗಲಿದೆ. ಅನಿರೀಕ್ಷಿತವಾಗಿ ಕೋವಿಡ್‌ ವೈರಾಣು ಕಾಣಿಸಿಕೊಂಡು ಸಾಕಷ್ಟು ಸಾವುನೋವು ಸಂಭವಿಸಿದ್ದರಿಂದ ಮುಂದೆ ಕಾಣಿಸಿಕೊಳ್ಳಬಹುದಾದ ಹೊಸ ಕಾಯಿಲೆಗಳು ಸೇರಿದಂತೆ 1226 ಬಗೆಯ ಕಾಯಿಲೆಗಳಿಗೆ ರಾಜ್ಯದ 888 ಆಸ್ಪತ್ರೆಗಳಲ್ಲಿ ನಗದುರಹಿತ ಚಿಕಿತ್ಸೆ ಪಡೆಯಬಹುದಾಗಿದೆ. ಆ ಮೂಲಕ ಸರಕಾರಿ ನೌಕರರ ವರ್ಗಕ್ಕೆ ಗುಣಮಟ್ಟದ ಆರೋಗ್ಯ ಸೇವೆ ಮೂಲಕ ಹೆಚ್ಚಿನ ಭದ್ರತೆ ಸಿಗಲಿದೆ’ ಎಂದು ವಿವರಿಸಿದರು.

  ‘ನಿವೃತ್ತ ನೌಕರರಿಗೆ ಈ ಸೌಲಭ್ಯ ವಿಸ್ತರಣೆ ಸಂಬಂಧ ಪ್ರಯತ್ನ ನಡೆಸಲು ಚಿಂತಿಸಲಾಗಿದೆ. 4.50 ಲಕ್ಷ ನಿವೃತ್ತ ನೌಕರರಿದ್ದು, ಅವರಿಗೂ ಆಯ್ದ ಆರೋಗ್ಯ ಸಮಸ್ಯೆಗಳಿಗೆ ನಗದುರಹಿತ ಚಿಕಿತ್ಸೆ ಕಲ್ಪಿಸಲು ಪ್ರಯತ್ನಿಸಲಾಗುವುದು. ನಿವೃತ್ತ ನೌಕರರಿಗೆ ಪಿಂಚಣಿ ಪಾವತಿಯಾಗುವ ಬ್ಯಾಂಕ್‌ ಖಾತೆಯಿಂದಲೇ ಶುಲ್ಕ ಕಡಿತ ಮಾಡಿಕೊಂಡು ಸೌಲಭ್ಯ ಕಲ್ಪಿಸುವ ಬಗ್ಗೆ ಚಿಂತಿಸಲಾಗುತ್ತಿದೆ,’ ಎಂದು ಹೇಳಿದರು.

  ಕೆಜಿಐಡಿ ಸೇವೆ ಆನ್‌ಲೈನ್‌

  ‘ಕೆಜಿಐಡಿಯಡಿ ಸಾಮೂಹಿಕ ಪಿಂಚಣಿ ವ್ಯವಸ್ಥೆಯಡಿ ವೇತನ ಪರಿಷ್ಕರಣೆಗೆ ಪೂರಕವಾಗಿ ವಿಮೆ ಮೊತ್ತ ಕಡಿತ, ವರ್ಗಾವಣೆಗೊಂಡ ನೌಕರರ ವಿಮೆ ವಿವರ ದಾಖಲಾತಿ, ಬಾಕಿ ವಿವರ, ಮುಂಗಡ, ಬಡ್ಡಿ, ಲಾಭಾಂಶ ಮಾಹಿತಿ ಸಕಾಲದಲ್ಲಿಸಿಗದೆ ತೊಂದರೆ ಅನುಭವಿಸುವಂತಾಗಿತ್ತು. ಜತೆಗೆ ಲೋಪ, ಅಕ್ರಮಗಳಿಗೂ ಅವಕಾಶವಾಗುತ್ತಿತ್ತು. ಈಗ ಆನ್‌ಲೈನ್‌ನಲ್ಲೇ ಎಲ್ಲಮಾಹಿತಿ ಸಿಗುವ ವ್ಯವಸ್ಥೆ ಜಾರಿಯಾಗುತ್ತಿದೆ,’ ಎಂದು ಸಿ.ಎಸ್‌.ಷಡಾಕ್ಷರಿ ಹೇಳಿದರು.

  ‘ಈಗಾಗಲೇ 42 ಲಕ್ಷ ವಿಮಾ ಪಾಲಿಸಿಗಳ ವಿವರ ಆನ್‌ಲೈನ್‌ನಲ್ಲಿ ಲಭ್ಯವಿದೆ. ಪ್ರಾಯೋಗಿಕ ಪರಿಶೀಲನೆಯೂ ಪೂರ್ಣಗೊಂಡಿದ್ದು, 15 ದಿನದೊಳಗೆ ಮುಖ್ಯಮಂತ್ರಿಗಳೇ ಚಾಲನೆ ನೀಡುವ ಸಾಧ್ಯತೆಯಿದೆ. ಮುಂಗಡ, ಸಾಲ, ಬಡ್ಡಿ, ಲಾಭಾಂಶ ಡಿವಿಡೆಂಡ್‌ ಇತರೆ ಸೇವೆ, ಮಾಹಿತಿ 24 ಗಂಟೆಯಲ್ಲಿಸಿಗಲಿದೆ. ವೇತನ ವಿವರ, ಮೂಲ ವೇತನ, ಕಡಿತ ಮೊತ್ತ, ಇತರೆ ವಿವರ ಮೊಬೈಲ್‌ನಲ್ಲೇ ಸಿಗಲಿದೆ. ಸಂಘದ ನಿರಂತರ ಪ್ರಯತ್ನದ ಪರಿಣಾಮ ಆನ್‌ಲೈನ್‌ ವ್ಯವಸ್ಥೆ ಶೀಘ್ರವೇ ಲಭ್ಯವಾಗಲಿದೆ’ ಎಂದು ನುಡಿದರು.

  Latest Posts

  ಮಂಗಳೂರು: ಪತ್ನಿಯ ಕೊಲೆಗೈದ ಪತಿಯ ಬಂಧನ

  ಬಜ್ಪೆ: ಮಹಿಳೆಯೋರ್ವರನ್ನು ದೊಣ್ಣೆಯಿಂದ ಹೊಡೆದು ಕೊಲೆ‌ಮಾಡಿದ ಘಟನೆ ಬಜ್ಪೆ ಪೋಲಿಸ್‌ ಠಾಣಾ ವ್ಯಾಪ್ತಿಯ ತೆಂಕಯೆಕ್ಕಾರು ದುರ್ಗಾನಗರ ಬಳಿ‌ ನಡೆದಿದೆ. ಸರಿತಾ(35)ಕೊಲೆಯಾದ ಮಹಿಳೆ.ಕುಡುಕನಾಗಿದ್ದ ಪತಿ ದುರ್ಗೇಶ್ ಸರಿತಾಗೆ...

  ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣ: ಕರಾವಳಿ ಜನರು ಸದಾ ಜಾಗೃತರಾಗಿರಬೇಕು – ಪೇಜಾವರ ಶ್ರೀ

  ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕರಾವಳಿ ಭಾಗದಲ್ಲಿ ಉಗ್ರ ಕೃತ್ಯಗಳು ಕುಕ್ಕರ್ ಬಾಂಬ್ ಸ್ಫೋಟದ ವೇಳೆ...

  ಉಪ್ಪಿನಂಗಡಿ: ಮಗಳನ್ನು ಮದುವೆ ಮಾಡಿ ಕೊಡಲು ನಿರಾಕರಿಸಿದ ಕಾರಣಕ್ಕೆ ತಂಡದಿಂದ ಹಲ್ಲೆ

  ಉಪ್ಪಿನಂಗಡಿ: ಮಗಳನ್ನು ತನಗೆ ಮದುವೆ ಮಾಡಿ ಕೊಡಲು ನಿರಾಕರಿಸಿದ ಎಂಬ ಕಾರಣಕ್ಕೆ ಆ ವ್ಯಕ್ತಿಯ ಮನೆಗೆ ಯುವಕನೋರ್ವ ತಂಡ ಕಟ್ಟಿಕೊಂಡು ನುಗ್ಗಿ ಮಾರಕಾಯುಧಗಳಿಂದ ಹಲ್ಲೆಗೈದು ಕೊಲೆಗೆ ಯತ್ನಿಸಿದ ಆರೋಪದಲ್ಲಿ ನಾಲ್ವರನ್ನು...

  ಕುಕ್ಕೆ ಸುಬ್ರಹ್ಮಣ್ಯದಲ್ಲಿ 2 ವರ್ಷಗಳ ಬಳಿಕ ನಡೆದ ಎಡೆಮಡೆಸ್ನಾನ ಸೇವೆ

  ಇತಿಹಾಸ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಆಚರಣೆ ನಡೆಯುತ್ತಿದ್ದು ಇದರ ಅಂಗವಾಗಿ ನಡೆಯುವ ಎಡೆಮಡೆಸ್ನಾನ ಬರೋಬ್ಬರಿ ಎರಡು ವರ್ಷಗಳ ಬಳಿಕ ಇಂದು ನಡೆದಿದೆ.

  Don't Miss

  ಚಾರ್ಮಾಡಿ : ಆಂಬುಲೆನ್ಸ್ ಹಾಗೂ ಆಟೋ ಮುಖಾಮುಖಿಯಾಗಿ ಡಿಕ್ಕಿ

  ಚಿಕ್ಕಮಗಳೂರು: ಅಂಬುಲೆನ್ಸ್ ಹಾಗೂ ಆಟೋ ಮುಖಾಮುಖಿಯಾಗಿ ಡಿಕ್ಕಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಚಾರ್ಮಾಡಿ...

  ಡಿ.2 ರಂದು ತುಳುವಿನಲ್ಲಿ ಕಾಂತಾರ ಬಿಡುಗಡೆ

  ಬೆಂಗಳೂರು: ಕೊನೆಗೂ ತುಳು ಭಾಷೆಯಲ್ಲಿ ಕಾಂತಾರ ಸಿನೆಮಾ ಬಿಡುಗಡೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಡಿಸೆಂಬರ್ 2 ರಂದು ತುಳು ಬಾಷೆಯಲ್ಲಿ ಕಾಂತಾರ ಸಿನೆಮಾ ಬಿಡುಗಡೆಯಾಗಲಿದೆ. ಕಾಂತಾರ ಇದೀಗ ಬಿಡುಗಡೆಯಾದ...

  ಮದುವೆಗೆ ಒಪ್ಪದ ಮಗಳನ್ನೇ ಕತ್ತು ಸೀಳಿ ಕೊಂದ ತಾಯಿ!

  ಕುಟುಂಬದವರು ನೋಡಿದ ಹುಡುಗನನ್ನು ಮದುವೆ ಆಗಲು ಒಪ್ಪಲಿಲ್ಲ ಅಂತ 20 ವರ್ಷದ ಮಗಳನ್ನೇ ತಾಯಿ ಕತ್ತು ಸೀಳಿ ಕೊಲೆ ಮಾಡಿದ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

  ಉಡುಪಿ: ರೋಸ್ ಸಮಾರಂಭದಲ್ಲಿ ಯುವತಿ ಕುಸಿದು ಬಿದ್ದು ಸಾವು

  ಉಡುಪಿ: ಕ್ರಿಶ್ಚಿಯನ್ನರ ಮನೆಯಲ್ಲಿ ನಡೆಯುವ ರೋಸ್ ಸಮಾರಂಭಕ್ಕೆ ಆಗಮಿಸಿದ್ದ ಯುವತಿಯೊಬ್ವರು ಕುಸಿದು ಬಿದ್ದು ಸಾವನ್ನಪ್ಪಿದ್ದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಮೃತ ಯುವತಿಯನ್ನು ಹಾವಂಜೆ...

  ರಿಯಲ್​ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

  ಬೆಂಗಳೂರು: ಸ್ಯಾಂಡಲ್​ವುಡ್​ ನಟ ರಿಯಲ್ ಸ್ಟಾರ್​ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು ನೆಲಮಂಗಲದಲ್ಲಿರುವ ಹರ್ಷ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಇಂದು ಏಕಾಏಕಿ ಮೂಗು ಬ್ಲಾಕ್​ ಆಗಿ, ಉಸಿರಾಟಕ್ಕೆ ತೊಂದರೆಯಾಗಿತ್ತು. ಹೀಗಾಗಿ ಆಸ್ಪತ್ರೆಗೆ...