ಹೊಸದಿಲ್ಲಿ : ಕೇಂದ್ರ ಸಚಿವ ಸಂಪುಟದಲ್ಲಿ ಬದಲಾವಣೆ ತರಲು ಪ್ರಧಾನಿ ನರೇಂದ್ರ ಮೋದಿಯವರು ಚಿಂತನೆ ನಡೆಸುತ್ತಿದ್ದು, ಜ.14ರ ಬಳಿಕ ಬದಲಾವಣೆ ಸಾಧ್ಯತೆ ಇದೆ.
ಬಿಜೆಪಿ ಸಂಘಟನೆಯನ್ನು ಬಲಪಡಿಸುವುದು ಮತ್ತು ಮುಂದಿನ ವರ್ಷ ನಡೆಯಲಿರುವ ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿರಿಸಿ ಸಂಪುಟದಲ್ಲಿ ಬದಲಾವಣೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.
ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ, ಅಂದರೆ ಸಂಕ್ರಾಂತಿ ಬಳಿಕ ಈ ವಿಸ್ತರಣೆ ನಡೆ ಯಬಹುದು ಎಂದು ಮೂಲಗಳು ಹೇಳಿವೆ.
ಈ ಸರಕಾರದಲ್ಲಿ ಕೇವಲ ಒಮ್ಮೆ ಮಾತ್ರ ಸಂಪುಟ ವಿಸ್ತರಣೆಯಾಗಿದೆ. ಕಳೆದ ಜೂ.8ರಂದು 12 ಸಚಿವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಲಾಗಿತ್ತು. ಈ ಬಾರಿ ಕೆಲವರನ್ನು ಕೈಬಿಟ್ಟು, ಕೆಲವರನ್ನು ಸೇರಿಸಿಕೊಳ್ಳಲಾಗುತ್ತದೆ ಎಂದು ಮೂಲಗಳು ಹೇಳಿವೆ.
