Friday, April 19, 2024
spot_img
More

    Latest Posts

    ಉಡುಪಿ: ಸಿಇಟಿ ಪರೀಕ್ಷೆ ಹಿನ್ನೆಲೆ:ಜೂ.16 ,17 ರಂದು ನಿಷೇಧಾಜ್ಞೆ ಜಾರಿ

    ಉಡುಪಿ: ಪ್ರಸಕ್ತ ಸಾಲಿನ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯು ಜೂನ್ 16 ಮತ್ತು 17 ರಂದು ಜಿಲ್ಲೆಯ 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ದಿನಗಳಂದು ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಯಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ. ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿದೆ.

    1973ರ ಕ್ರಿಮಿನಲ್ ಪ್ರೊಸೀಜರ್ ಕೋಡ್ ಸೆಕ್ಷನ್ 144(1)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss