Saturday, December 9, 2023

ಮಂಗಳೂರಿನಲ್ಲಿ ಮೂರು ದಿನ ನೀರು ಪೂರೈಕೆ ವ್ಯತ್ಯಯ

ಮಂಗಳೂರು: ಮಂಗಳೂರು ಮಹಾ ನಗರಪಾಲಿಕೆಯು ನೀರು ಸರಬರಾಜು ವ್ಯವಸ್ಥೆಯ ಕೊಳವೆಯನ್ನು ಬಲಪಡಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಡಿ. 6 ರ ಬುಧವಾರ ಬೆಳಗ್ಗೆ 6 ಗಂಟೆಯಿಂದ ಡಿ. 8 ರ...
More

    Latest Posts

    ಬಂಟ್ವಾಳ: ಗ್ಯಾಸ್ ಸೋರಿಕೆಯಿಂದ ಮನೆಗೆ ಬೆಂಕಿ

    ಬಂಟ್ವಾಳ : ಬಂಟ್ವಾಳ ತಾಲೂಕು ಪುದು ಗ್ರಾಮದ ಕಬೆಲ ನಿವಾಸಿ ಉಮೇಶ್ ಪೂಜಾರಿ ಯವರ ಬಾಡಿಗೆ ಮನೆಯಲ್ಲಿ ಬಾಡಿಗೆದಾರ ಹೊನ್ನಪ್ಪ ಗೌಡ ರವರ ಅಡುಗೆ ಅನಿಲ ಸೋರಿಕೆ ಯಾಗಿ ಗುರುವಾರ...

    ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕ ವತಿಯಿಂದ ಪೋಲಿಸ್‌ ಅಧೀಕ್ಷಕರಾದ ಡಾ. ಅರುಣ್‌ ರವರ ಭೇಟಿ

    ಇಂದು 08-12-2023 ರಂದು ಮಧ್ಯಾಹ್ನ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕವು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅದ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ನೇತ್ರತ್ವದಲ್ಲಿ ನೂರಾರು ವೈದ್ಯರುಗಳು...

    ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕ ವತಿಯಿಂದ ಜಿಲ್ಲಾಧಿಕಾರಿ ವಿಧ್ಯಾಕುಮಾರಿಯವರ ಭೇಟಿ

    ಇಂದು 08-12-2023 ರಂದು ಸಂಜೆ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕವು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅದ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ನೇತ್ರತ್ವದಲ್ಲಿ ನೂರಾರು ವೈದ್ಯರುಗಳು...

    ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕ ವತಿಯಿಂದ ನೂತನ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಐ.ಪಿ ಗಡಾದ್ ರವರ ಭೇಟಿ

    ಇಂದು 08-12-2023 ರಂದು ಬೆಳ್ಳಿಗೆ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕವು ತುಳುನಾಡ ರಕ್ಷಣಾ ವೇದಿಕೆಯ ಕೇಂದ್ರೀಯ ಮಂಡಳಿ ಅದ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ನೇತ್ರತ್ವದಲ್ಲಿ ನೂರಾರು...

    ಮೇ 20, 21: ಸಿಇಟಿ ಪರೀಕ್ಷೆ- ವಿದ್ಯಾರ್ಥಿಗಳಿಗೆ ಸೂಚನೆಗಳು

    ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 20 ಮತ್ತು 21ರಂದು 2023ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲಿದೆ. ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆರ್ಟನರಿ, ಬಿ. ಎಸ್. ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ ಇದಾಗಿದೆ.

    ಈ ಬಾರಿಯ ಸಿಇಟಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಜಿಲ್ಲಾಧಿಕಾರಿಗಳು ಪರೀಕ್ಷೆ ಪೂರ್ವಭಾವಿ ಸಭೆಯನ್ನು ನಡೆಸಿ, ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ಮೇ 20 ಮತ್ತು 21 ರಂದು ಬೆಳಗ್ಗೆ 10.30 ರಿಂದ 11.50ರ ತನಕ ಮತ್ತು ಮಧ್ಯಾಹ್ನ 2.30 ರಿಂದ 3.50ರ ತನಕ ಸಿಇಟಿ ಪರೀಕ್ಷೆಗಳು ನಡೆಯಲಿದೆ. ಎಲ್ಲಾ ಪರೀಕ್ಷಾ ಕೇಂದ್ರದ ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಎಲ್ಲಾ ಸೂಚನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ನಿರ್ದೇಶನ ನೀಡಲಾಗಿದೆ.

    ಮೇ 20ರಂದು ಬೆಳಗ್ಗೆ 10.30 ಗಂಟೆಯಿಂದ 11.50 ಗಂಟೆಯವರೆಗೆ ಜೀವಶಾಸ್ತ್ರ ಹಾಗೂ ಮಧ್ಯಾಹ್ನ 2.30 ರಿಂದ 3.50 ಗಂಟೆಯವರೆಗೆ ಗಣಿತ ಪರೀಕ್ಷೆ ನಡೆಯಲಿದೆ. ಮೇ 21 ರಂದು ಬೆಳಗ್ಗೆ 10.30 ಗಂಟೆಯಿಂದ 11.50 ಗಂಟೆಯವರೆಗೆ ಭೌತಶಾಸ್ತ್ರ ಹಾಗೂ ಮಧ್ಯಾಹ್ನ 2.30 ರಿಂದ 3.50 ಗಂಟೆಯವರೆಗೆ ರಾಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ.

    ವಿದ್ಯಾರ್ಥಿಗಳಿಗೆ ಸೂಚನೆಗಳು; ಸಿಇಟಿ ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗೆ ಯಾವುದೇ ರೀತಿಯ ಕೈಗಡಿಯಾರವನ್ನು ಕಟ್ಟಿಕೊಂಡು ಅಥವಾ ತೆಗೆದುಕೊಂಡು ಹೋಗುವಂತಿಲ್ಲ.

    ಕ್ಯಾಲ್ಕುಲೇಟರ್ ಅಥವಾ ಲಾಗ್ ಟೇಬಲ್‌ಗಳ ಉಪಯೋಗವನ್ನು ಪರೀಕ್ಷಾ ಸಮಯದಲ್ಲಿ ನಿಷೇಧಿಸಲಾಗಿದೆ. ಪರೀಕ್ಷಾ ಕೊಠಡಿ ಒಳಗೆ ಯಾವುದೇ ರೀತಿಯ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳನ್ನು (ಮೊಬೈಲ್, ಬ್ಲೂ ಟೂತ್, ಸ್ಲೈಡ್ ರೂಲ್ಸ್, ಕ್ಯಾಲ್ಕುಲೇಟರ್, ವೈಟ್ ಪ್ಲೂಯಿಡ್, ವೈಯರ್ ಲೆಸ್ ಸೆಟ್ಸ್ ಮತ್ತಿತರ) ನಿಷೇಧಿಸಲಾಗಿದೆ. ಸಿಇಟಿ ಪರೀಕ್ಷೆ ನಡೆಯುವ ಪ್ರತಿ ಪರೀಕ್ಷಾ ಕೇಂದ್ರಕ್ಕೆ ವೀಕ್ಷಕರನ್ನು ಹಾಗೂ ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಿಗೆ ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ. ಕೊಠಡಿ ಮೇಲ್ವಿಚಾರಕರು. ಪರೀಕ್ಷೆ ಉಸ್ತುವಾರಿ ನೋಡಿಕೊಳ್ಳುತ್ತಾರೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಲಾಗಿದೆ. ಸೂಕ್ತ ಪೊಲೀಸ್ ಭದ್ರತೆ ನೀಡುವಂತೆ ಪೊಲೀಸ್ ಇಲಾಖೆಯೂ ಸೂಚನೆ ನೀಡಲಾಗಿದೆ. ಎಲ್ಲಾ ಕೇಂದ್ರಗಳಿಗೆ ಆರೋಗ್ಯ ಸಹಾಯಕರನ್ನು ನೇಮಿಸುವಂತೆ ಆರೋಗ್ಯ ಇಲಾಖೆಗೆ ಮತ್ತು ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗದಂತೆ ಎಚ್ಚರವಹಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. ವಿದ್ಯಾರ್ಥಿಗಳು ತುಂಬು ತೋಳಿನ ಶರ್ಟ್ ಹಾಗೂ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆಗಳು ಆರಂಭವಾಗುವ ಸಮಯಕ್ಕಿಂತ ಸಾಕಷ್ಟು ಮುಂಚಿತವಾಗಿ ವಿದ್ಯಾರ್ಥಿಗಳು ಕೇಂದ್ರದಲ್ಲಿ ಹಾಜರಿರುವಂತೆ ಹಾಗೂ ತಮ್ಮ ಪರೀಕ್ಷಾ ಪ್ರವೇಶ ಪತ್ರದ ಜೊತೆ ಯಾವುದಾದರೊಂದು ಗುರುತಿನ ಚೀಟಿಯನ್ನು (ಕಾಲೇಜಿನ ಗುರುತಿನ ಚೀಟಿ, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್) ತರಬೇಕು ಎಂದು ತಿಳಿಸಲಾಗಿದೆ.

    Latest Posts

    ಬಂಟ್ವಾಳ: ಗ್ಯಾಸ್ ಸೋರಿಕೆಯಿಂದ ಮನೆಗೆ ಬೆಂಕಿ

    ಬಂಟ್ವಾಳ : ಬಂಟ್ವಾಳ ತಾಲೂಕು ಪುದು ಗ್ರಾಮದ ಕಬೆಲ ನಿವಾಸಿ ಉಮೇಶ್ ಪೂಜಾರಿ ಯವರ ಬಾಡಿಗೆ ಮನೆಯಲ್ಲಿ ಬಾಡಿಗೆದಾರ ಹೊನ್ನಪ್ಪ ಗೌಡ ರವರ ಅಡುಗೆ ಅನಿಲ ಸೋರಿಕೆ ಯಾಗಿ ಗುರುವಾರ...

    ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕ ವತಿಯಿಂದ ಪೋಲಿಸ್‌ ಅಧೀಕ್ಷಕರಾದ ಡಾ. ಅರುಣ್‌ ರವರ ಭೇಟಿ

    ಇಂದು 08-12-2023 ರಂದು ಮಧ್ಯಾಹ್ನ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕವು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅದ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ನೇತ್ರತ್ವದಲ್ಲಿ ನೂರಾರು ವೈದ್ಯರುಗಳು...

    ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕ ವತಿಯಿಂದ ಜಿಲ್ಲಾಧಿಕಾರಿ ವಿಧ್ಯಾಕುಮಾರಿಯವರ ಭೇಟಿ

    ಇಂದು 08-12-2023 ರಂದು ಸಂಜೆ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕವು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅದ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ನೇತ್ರತ್ವದಲ್ಲಿ ನೂರಾರು ವೈದ್ಯರುಗಳು...

    ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕ ವತಿಯಿಂದ ನೂತನ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಐ.ಪಿ ಗಡಾದ್ ರವರ ಭೇಟಿ

    ಇಂದು 08-12-2023 ರಂದು ಬೆಳ್ಳಿಗೆ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕವು ತುಳುನಾಡ ರಕ್ಷಣಾ ವೇದಿಕೆಯ ಕೇಂದ್ರೀಯ ಮಂಡಳಿ ಅದ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ನೇತ್ರತ್ವದಲ್ಲಿ ನೂರಾರು...

    Don't Miss

    ಹಾಗಲಕಾಯಿ ತಿನ್ನುವುದರಿಂದ ಸಿಗಲಿವೆ ಈ ಆರೋಗ್ಯ ಲಾಭಗಳು.!

    ಹಾಗಲಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಾಗಲಕಾಯಿಯಲ್ಲಿ ಸೋಡಿಯಂ, ಪೊಟ್ಯಾಸಿಯಮ್, ಕಬ್ಬಿಣ, ಫೈಬರ್ ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ. ಹಾಗಲಕಾಯಿ ಅನೇಕ ರೋಗಗಳಿಗೆ ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ (ಹಾಗಲಕಾಯಿಯ...

    ಉಡುಪಿ: ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳ ಕಳವು

    ಉಡುಪಿ: ಮನೆಯೊಳಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ. ಸಂತೆಕಟ್ಟೆಯ ಸೋಲಾಂಗೆ ಸ್ಮಿತಾ ಲೂಯಿಸ್‌ ಅವರು ಮುಂಬಯಿಗೆ ತೆರಳಿದ್ದು, ನ. 29 ರಂದು...

    ಮಂಗಳೂರು: ಶಿಶುವನ್ನು ಹತ್ಯೆಗೈದು ಬಾಣಂತಿ ನೇಣಿಗೆ ಶರಣು..!

    ಮಂಗಳೂರು: ಬಾಣಂತಿಯೊಬ್ಬಳು ನಾಲ್ಕುವರೆ ತಿಂಗಳ ಗಂಡು ಶಿಶುವನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟ್ ಫ್ಲ್ಯಾಟ್ ನಲ್ಲಿ ನಡೆದಿದೆ. ಫಾತಿಮಾ...

    ಬೆಂಗಳೂರು: ಮೇಲಾಧಿಕಾರಿಗಳ ಕಿರುಕುಳ-ವೈದ್ಯರು ಆತ್ಮಹತ್ಯೆ..!

    ಬೆಂಗಳೂರು: ಆರೋಗ್ಯ ಇಲಾಖೆ ಅಧಿಕಾರಿಯಾಗಿದ್ದ ವೈದ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ಡಾಕ್ಟರ್ ಮೃತದೇಹ ಪತ್ತೆಯಾಗಿದೆ. ಮೃತ...

    ಬೆಳ್ತಂಗಡಿ: ಶಾಲಾ ಬಾಲಕನಿಗೆ ಎಸ್‌ಡಿಎಂಸಿ ಅಧ್ಯಕ್ಷನಿಂದ ಹಲ್ಲೆ..!- ಪ್ರಕರಣ ದಾಖಲು

    ಬೆಳ್ತಂಗಡಿ: ಎಸ್‌ಡಿಎಂಸಿ ಅಧ್ಯಕ್ಷರಿಂದ ಶಾಲಾ ವಿದ್ಯಾರ್ಥಿಯ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ ಘಟನೆ ಬಳ್ಳಮಂಜ ಮಚ್ಚಿನ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ಎಸ್‌ಡಿಎಂಸಿ ಅಧ್ಯಕ್ಷ...