Monday, June 24, 2024
spot_img
More

  Latest Posts

  ಮಂಗಳೂರು: ಸರಗಳ್ಳತನ ಹಾಗೂ ದ್ವಿಚಕ್ರ ವಾಹನ ದೋಚುತ್ತಿದ್ದ ಕುಖ್ಯಾತ ಕಳ್ಳರ ಬಂಧನ

  ಮಂಗಳೂರು: ದ.ಕ ಹಾಗೂ ಉಡುಪಿ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಹಾಗೂ ದ್ವಿಚಕ್ರ ವಾಹನ ದೋಚುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಹೆಡೆಮುರಿ‌ ಕಟ್ಟುವಲ್ಲಿ ಮಂಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತ ಆರೋಪಿ ಕೃಷ್ಣಾಪುರ ಮೂಲದ ಹಬೀಬ್ ಹಾಸನ ಮತ್ತು ಉಳ್ಳಾಲದ ಮೊಹಮ್ಮದ್ ಫೈಸಲ್ ಎಂದು ಗುರುತಿಸಲಾಗಿದೆ. ಇಬ್ಬರು ಈ ಹಿಂದೆ ಮಂಗಳೂರು ಕಾರಾಗೃಹ ಹಾಗೂ ಕಾರವಾರ ಜೈಲಿನಲ್ಲಿದ್ದು ಸಜೆ ಅನುಭವಿಸಿದ್ದರು.ಇಬ್ಬರ ಬಂಧನದ ನಂತರ 12 ಪ್ರಕರಣಗಳ ಪೈಕಿ 8 ಚೈನ್ ಸ್ನ್ಯಾಚಿಂಗ್ ಮತ್ತು ನಾಲ್ಕು ಬೈಕ್ ಕಳ್ಳತನ ಪ್ರಕರಣಗಳನ್ನು ಭೇದಿಸಲಾಗಿದೆ. ಬಂಧಿತರಿಂದ 14 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.ಹಬೀಬ್ ಹಸನ್ ವಿರುದ್ಧ 35 ಪ್ರಕರಣಗಳು ದಾಖಲಾಗಿದ್ದು, ಮೊಹಮ್ಮದ್ ಫೈಸಲ್ ವಿರುದ್ಧ ಉಡುಪಿ, ದಕ್ಷಿಣ ಕನ್ನಡ ಮತ್ತು ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ 15 ಪ್ರಕರಣಗಳಿವೆ. ಮೊಹಮ್ಮದ್ ಫೈಸಲ್ ಎಂಬಾತ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದರಲ್ಲಿ ಅಪರಾಧಿಯಾಗಿದ್ದ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss