ಉಡುಪಿ: ಉದ್ಯಮಿಯೊಬ್ಬರಿಗೆ ಬಿಜೆಪಿ ಎಂಎಲ್ಎ ಟಿಕೆಟ್ ಕೊಡುವುದಾಗಿ ಹೇಳಿ ವಂಚಿಸಿದ್ದ ಆರೋಪದ ಮೇಲೆ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸೇರಿ ನಾಲ್ವರನ್ನು ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಚೈತ್ರಾ ಕುಂದಾಪುರ, ಗಗನ್ ಕಡೂರು, ಶ್ರೀಕಾಂತ ನಾಯಕ್, ಪ್ರಸಾದ್ ಆರೋಪಿಗಳು.
ಉಡುಪಿ ಜಿಲ್ಲೆಯ ಬೈಂದೂರಿನ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಇವರನ್ನು ವಶಕ್ಕೆ ಪಡೆಯಲಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಇವರಿಂದ 7 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂಬ ಆರೋಪ ಈ ನಾಲ್ವರ ವಿರುದ್ಧವಿದೆ.