ಹುಬ್ಬಳ್ಳಿ: ಸರಳ ವಾಸ್ತು ಗುರೂಜಿ ಚಂದ್ರಶೇಖರ್ ಅವರು ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಬರ್ಬರ ಹತ್ಯೆ ನಡೆದಿದೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ.
ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುವ ಮೂಲಕ ಕರ್ನಾಟಕದಲ್ಲಿ ಮನೆಮಾತಾಗಿದ್ದ ಅವರು ಸರಳ ವಾಸ್ತು ಸಲಹೆ ಬಗ್ಗೆ ಹಲವು ಪುಸ್ತಕ ಬರೆದಿದ್ದಾರೆ.
ಹೋಟೆಲ್ ನ ರಿಸೆಕ್ಷನ್ ನಲ್ಲೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.
ಆವರ ಮೃತ ದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಈವರೆಗೂ 2 ಸಾವಿರಕ್ಕೂ ಅಧಿಕ ಸೆಮಿನಾರ್‌ಗಳಲ್ಲಿ ಮಾತನಾಡಿರುವ ಚಂದ್ರಶೇಖರ್, ಈವರೆಗೂ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ 16 ಪ್ರಶಸ್ತಿಗಳನ್ನು ಸಂಪಾದಿಸಿದ್ದಾರೆ.
ಸಿವಿಲ್ ಇಂಜಿನಿಯರಿಂಗ್ ಜೊತೆಗೆ ಕಾಸ್ಮಿಕ್ ಆರ್ಕಿಟೆಕ್ಚರ್ ನಲ್ಲಿ ಡಾಕ್ಟರೇಟ್ ಪದವಿಯನ್ನೂ ಅವರು ಸಂಪಾದಿಸಿದ್ದರು. ಸ್ಥಳಕ್ಕೆ ಹುಬ್ಬಳ್ಳಿ ಪೊಲೀಸ್ ಆಯುಕ್ತ ಲಾಬೂರಾಮ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.