ಚಂದ್ರಯಾನ-3 ಲ್ಯಾಂಡಿಂಗ್ ಕುರಿತು ಇಸ್ರೋ ವಿಜ್ಞಾನಿಗಳು ಇದೀಗ ಮಹತ್ವದ ಘೋಷಣೆ ಮಾಡಿದ್ದಾರೆ.
ಸ್ವಯಂಚಾಲಿತ ಲ್ಯಾಂಡಿಂಗ್ ಸೀಕ್ವೆನ್ಸ್ (ALS) ಪ್ರಾರಂಭಕ್ಕೆ ಎಲ್ಲವೂ ಸಿದ್ಧವಾಗಿದೆ. ಸಂಜೆ 5 ಗಂಟೆ 44 ನಿಮಿಷ ಸುಮಾರಿಗೆ ಗೊತ್ತುಪಡಿಸಿದ ಸ್ಥಳದಲ್ಲಿ ಲ್ಯಾಂಡರ್ ಮಾಡ್ಯೂಲ್ (LM) ಆಗಮನದ ನಿರೀಕ್ಷೆ ಇದೆ.
ಕಾರ್ಯಾಚರಣೆಯ ನೇರ ಪ್ರಸಾರ ಸಂಜೆ 5.20ರಿಂದ ಆರಂಭವಾಗಲಿದೆ. ಸಂಜೆ 6 ಗಂಟೆ 4 ನಿಮಿಷಕ್ಕೆ ವಿಕ್ರಮ್ ಲ್ಯಾಂಡರ್ ಚಂದಿರನನ್ನು ಸ್ಪರ್ಶ ಮಾಡಲಿದೆ ಎಂದು ಇಸ್ರೋ ಟ್ವಿಟ್ ಮಾಡಿದೆ.
©2021 Tulunada Surya | Developed by CuriousLabs