Tuesday, April 16, 2024
spot_img
More

    Latest Posts

    ಚೆಕ್‌ ಬೌನ್ಸ್‌ ಪ್ರಕರಣ: 88 ಲ.ರೂ. ಪಾವತಿಸಲು ಆದೇಶ, ತಪ್ಪಿದರೆ 6 ತಿಂಗಳ ಜೈಲು – ನ್ಯಾಯಾಲಯ

    ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ಲಿ.ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್‌ ಆದ ಹಿನ್ನೆಲೆಯಲ್ಲಿ ಒಟ್ಟು 88 ಲ.ರೂ. ಪಾವತಿಸಬೇಕು. ತಪ್ಪಿದರೆ 6 ತಿಂಗಳ ಸಜೆ ಅನುಭವಿಸಬೇಕು ಎಂದು ನ್ಯಾಯಾಲಯ ತೀರ್ಪು ನೀಡಿದೆ.

    ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ಲಿ. ಸಂಸ್ಥೆಯಿಂದ ಮಂಜುನಾಥ ಖಾರ್ವಿ ಮೀನು ಖರೀದಿ ಮಾಡಿದ್ದರು. ಅಲ್ಲದೆ ಫೆಡರೇಷನ್‌ಗೆ ಮೀನು ಮಾರಾಟವಾದ ಕಮಿಷನ್‌ ಕೂಡ ಬಾಕಿ ಇರಿಸಿದ್ದರು. ಈ ಮೊತ್ತಕ್ಕೆ ಮೂರು ಚೆಕ್‌ಗಳನ್ನು ಫೆಡರೇಷನ್‌ಗೆ ನೀಡಿದ್ದರು. ಆ ಚೆಕ್‌ಗಳನ್ನು ಬ್ಯಾಂಕ್‌ಗೆ ನೀಡಿದಾಗ ಖಾತೆಯಲ್ಲಿ ಹಣವಿಲ್ಲದೆ ಅಮಾನತುಗೊಂಡಿದ್ದವು. ಇದಕ್ಕೆ ಸಂಬಂಧಿಸಿದ ನೋಟಿಸ್‌ ನೀಡದರೂ ಬಾಕಿ ಮೊತ್ತ ನೀಡಿರಲಿಲ್ಲ. ಈ ಕುರಿತು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಲಾಗಿತ್ತು. ಅವರ ಮೇಲೆ ಮೂರು ಪ್ರಕರಣ ದಾಖಲಾಗಿತ್ತು.

    5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಚಿನ್ಮಯಿ ಅವರು ಮೂರು ಪ್ರಕರಣಗಳಲ್ಲಿ ಆರೋಪಿ 5 ಲ.ರೂ., 53 ಲ.ರೂ. ಮತ್ತು 30 ಲ.ರೂ. ಸೇರಿದಂತೆ ಒಟ್ಟು 88 ಲ.ರೂ. ಪಾವತಿಸಬೇಕು. ಇಲ್ಲವಾದರೆ 6 ತಿಂಗಳ ಸಜೆ ಅನುಭವಿಸಬೇಕು ಎಂದು ತೀರ್ಪು ನೀಡಿದ್ದಾರೆ.

    ದೂರುದಾರರ ಪರ ವೆರಿಟಾಸ್‌ ಲೆಗೀಸ್‌ ಅಸೋಸಿಯೇಷನ್‌ ಮಂಗಳೂರಿನ ವಕೀಲರಾದ ರಾಘವೇಂದ್ರ ರಾವ್‌, ಗೌರಿ ಶೆಣೈ, ಅಭಿಲಾಷ್‌ ಶಾಸ್ತ್ರಿ ಮತ್ತು ಜಯಶ್ರೀ ವಾದಿಸಿದ್ದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss