ಮಂಗಳೂರು: 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ, ಸೆಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಉರ್ವ ಶಾಖೆಯು ಮಂಗಳೂರಿನ ಕಾರ್ಸ್ಟ್ರೀಟ್ನಲ್ಲಿರುವ ಚೇತನ ವಿಶೇಷ ಶಾಲೆಗೆ ಭೇಟಿ ನೀಡಿ 120 ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸಿತು. ಈ ಕಾರ್ಯಕ್ರಮವು ಶಾಲೆಯ ಆವರಣದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಅವರು, ಸೆಂಟ್ ಮಿಲಾಗ್ರಿಸ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಈ ಉತ್ತಮ ಕಾರ್ಯವನ್ನು ಶ್ಲಾಘಿಸಿದರು. ಸೊಸೈಟಿಯಂತಹ ಸಂಸ್ಥೆಗಳು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡು ಸಮಾಜದ ಏಳಿಗೆಗೆ ಕೈಜೋಡಿಸಿರುವುದು ಉತ್ತಮ ಬೆಳವಣಿಗೆ ಎಂದರು. ಮುಂದಿನ ದಿನಗಳಲ್ಲೂ ಇಂತಹ ಕಾರ್ಯಗಳು ಮುಂದುವರಿಯಲಿ ಎಂದು ಅವರು ಆಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೇವಾ ಭಾರತೀಯ (ಸಿಇಒ) ಪೃಥ್ವಿ ಪಾಲ್ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಕಾರ್ಯಕ್ರಮವನ್ನು ಶ್ರೀಮತಿ ಪ್ರತಿಮಾ ನಿರೂಪಿಸಿದರು. ಕುಮಾರಿ ರಕ್ಷಿತಾ ಸಂಸ್ಥೆಯ ಕಿರು ಪರಿಚಯ ನೀಡಿದರು. ಕುಮಾರಿ ಸಿಂಚನ ಸ್ವಾಗತ ಭಾಷಣ ಮಾಡಿದರು ಮತ್ತು ಮನೀಶ್ ಧನ್ಯವಾದ ಸಮರ್ಪಿಸಿದರು.
ಈ ಕಾರ್ಯಕ್ರಮದಲ್ಲಿ ಸ್ಥಳೀಯ ಕಾರ್ಪೊರೇಟರ್ ಪೂರ್ಣಿಮಾ, ತೋಕೂರಿನ ರಾಮಣ್ಣ ಶೆಟ್ಟಿ ಶಾಲೆ ಮುಖ್ಯೋಪಾಧ್ಯಾಯರಾದ ಶ್ರೀಲತಾ ರಾವ್, ಉದ್ಯಮಿ ಶ್ರೀನಿವಾಸ್ ಕಾಮತ್, ಶ್ರೀಮತಿ ಸುಪ್ರಿತಾ, ನಾಗರಾಜ್ ಮಡಿವಾಳ್ (ಡೆವಲಪ್ಮೆಂಟ್ ಮ್ಯಾನೇಜರ್) ಹಾಗೂ ಬ್ರಾಂಚ್ ಮ್ಯಾನೇಜರ್ ಅಮಿತ್ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
