Tuesday, June 25, 2024
spot_img
More

  Latest Posts

  ವಿಟ್ಲ: ಖಾಸಗಿ ಬಸ್‌ಸ್ಟ್ಯಾಂಡಿನಲ್ಲಿ ಬಸ್‌ ಡ್ರೈವರ್‌ಗಳ ಮಧ್ಯೆ ಹೊಡೆದಾಟ ; ಮೂವರ ವಿರುದ್ಧ FIR ದಾಖಲು

  ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಕೈಯಿಂದ ದೂಡಾಡಿಕೊಂಡು ಸಾರ್ವಜನಿಕ ಅಶಾಂತಿಗೆ ಕಾರಣವಾದ ಮೂವರು ಬಸ್ ಚಾಲಕರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದು FIR ದಾಖಲಿಸಿದ್ದರೆ.

  ಚಾಲಕರಾದ ಚಿಂತನ್, ಹೊನ್ನಯ್ಯ, ಯತಿರಾಜ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ವಿಟ್ಲ ಖಾಸಗಿ ಬಸ್ಸ್ ನಿಲ್ದಾಣದಲ್ಲಿದ್ದ ಮೂವರು ವ್ಯಕ್ತಿಗಳು ಸಾರ್ವಜನಿಕ ಸ್ಥಳವಾದ ಬಸ್ ತಂಗುದಾಣದಲ್ಲಿ ಪರಸ್ಪರ ಒಬ್ಬರಿಗೊಬ್ಬರು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಕೈಯಿಂದ ದೂಡಾಡಿಕೊಂಡು ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗವಾಗುವ ರೀತಿಯಲ್ಲಿ ಕಲಹ ನಡೆಸಿದ್ದ ಆರೋಪ ಇವರ ಮೇಲಿದ್ದು ಮೂವರನ್ನು ಹಿಡಿದು ಠಾಣೆಗೆ ಹಾಜರುಪಡಿಸಲಾಗಿದೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss