Friday, April 19, 2024
spot_img
More

    Latest Posts

    ನಾಳೆ (ಡಿ. 25) ಸಿಎಂ ಬೊಮ್ಮಾಯಿ ದ.ಕ ಜಿಲ್ಲಾ ಪ್ರವಾಸ

    ಮಂಗಳೂರು: ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನಾಳೆ (ಡಿ.25) ಭಾನುವಾರ ದ.ಕ. ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

    ಡಿ.25ರ ಭಾನುವಾರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಪ್ರಯಾಣಿಸಿ ಸಂಜೆ 4 ಗಂಟೆಗೆ ಮಂಗಳೂರು ತಲುಪುವರು.ಸಂಜೆ 4.10ಕ್ಕೆ ಮಂಗಳೂರಿನಿಂದ ಹೊರಟು 5 ಗಂಟೆಗೆ ಮೂಡಬಿದಿರೆ ಆಳ್ವಾಸ್ ಕ್ಯಾಂಪಸ್‍ನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಆಯೋಜಿಸಿರುವ ಅಂತರಾಷ್ಟ್ರೀಯ ಜಾಂಬೂರಿ ಹಾಗೂ ಏಕ್ ಭಾರತ್-ಶ್ರೇಷ್ಠ ಭಾರತ್, ನಮ್ಮ ಸಂಸ್ಕೃತಿ-ಸ್ವಚ್ಛ ಸಂಸ್ಕೃತಿ, ಸಂಸ್ಕೃತಿಯಿಂದ ಯುವಜನರ ಒಗ್ಗಟ್ಟು ಕಾರ್ಯಕ್ರಮದ ಅನಾವರಣ ಮಾಡುವರು. ರಾತ್ರಿ 8 ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ಹೊರಟು 9 ಗಂಟೆಗೆ ಬೆಳಗಾವಿ ಜಿಲ್ಲೆಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss