Thursday, September 28, 2023

ಯಶಸ್ವಿಯಾಗಿ ನಡೆದ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಮಹಿಳಾ ಘಟಕ ಸಭೆ

ತುಳುನಾಡ ರಕ್ಷಣಾ ವೇದಿಕೆ ಉಡುಪಿ ಮಹಿಳಾ ಘಟಕದ ಸಭೆ ಮಹಿಳಾ ಘಟಕ ಅಧ್ಯಕ್ಷರಾದ ಶೋಭಾ ಪಾಂಗಳ ರವರ ನೇತೃತ್ವದಲ್ಲಿ ದಿನಾಂಕ 24-09-2023 ರಂದು ಉಡುಪಿ ಹೋಟೆಲ್ ನೈವೇದ್ಯ ದಲ್ಲಿ ಜರುಗಿತ್ತು....
More

    Latest Posts

    ನಾಳೆಯ ಕರ್ನಾಟಕ ಬಂದ್ ಗೆ ಕರಾವಳಿಯಿಂದ ಬೆಂಬಲ ಇಲ್ಲ : ದಿಲ್ ರಾಜ್ ಆಳ್ವ

    ಕಾವೇರಿ ನದಿ ನೀರಿನ ಹೋರಾಟ ನಾಳೆ ನಡೆಯಲಿರುವ ಕರ್ನಾಟಕ ಬಂದ್‌ಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್‌ ಮಾಡಿ ಜನರು ಕಾವೇರಿ ಹೋರಾಟಕ್ಕೆ...

    ಉಪ್ಪಿನಂಗಡಿ: 500 ರೂ. ಟಿಕೆಟ್ ಖರೀದಿಸಿದ್ದ ಮೇಸ್ತ್ರಿಗೆ ಒಲಿದ 50 ಲಕ್ಷ ಬಂಪರ್ ಕೇರಳ ಲಾಟರಿ

    ಉಪ್ಪಿನಂಗಡಿಯ ಮೇಸ್ತ್ರಿಯೊಬ್ಬರಿಗೆ ಕೇರಳ ಅದೃಷ್ಟ ಲಾಟರಿ ಒಲಿದಿದೆ. ಕಾನತ್ತೂರು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಇಳಂತಿಲ ನಿವಾಸಿ ಚಂದ್ರಯ್ಯ ಎಂಬುವವರು 500 ರೂಪಾಯಿಯ ಲಾಟರಿ ಟಿಕೆಟ್ ಖರೀದಿಸಿದ್ದರು. ಈ ಟಿಕೆಟ್‌ ಗೆ...

    ಸುಳ್ಯ : ಕೆವಿಜಿ ಪ್ರಿನ್ಸಿಪಾಲ್ ರಾಮಕೃಷ್ಣ ಕೊಲೆ ಪ್ರಕರಣ- ಕೆ.ವಿ.ಜಿ. ಪುತ್ರ ಡಾ.ರೇಣುಕಾಪ್ರಸಾದ್ ಸಹಿತ 6 ಮಂದಿ ದೋಷಿಗಳು.!

    ಬೆಂಗಳೂರು: 12 ವರ್ಷದ ಹಿಂದೆ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸುಳ್ಯ ಕೆವಿಜಿ ಪಾಲಿಟೆಕ್ನಿಕ್‌  ಪ್ರಾಂಶುಪಾಲರಾಗಿದ್ದ ಎ.ಎಸ್‌ ರಾಮಕೃಷ್ಣ  ಅವರ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಡಾ.ರೇಣುಕಾ ಪ್ರಸಾದ್‌ ...

    ಸೆ.30ರಂದು ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ನಗರ ಘಟಕದ ನೂತನ ಅಧ್ಯಕ್ಷ ಶರಣ್ ರಾಜ್ ಕೆ.ಆರ್ ರವರ ಪದಗ್ರಹಣ

    ಮಂಗಳೂರು: ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ನಗರ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶರಣ್ ರಾಜ್ ಕೆ.ಆರ್ ರವರ ಪದಗ್ರಹಣ ಕಾರ್ಯಕ್ರಮ ಸೆ.30 ಶನಿವಾರದಂದು ಬೆಳಗ್ಗೆ11.00 ಗಂಟೆಗೆ ವುಡ್ ಲ್ಯಾಂಡ್...

    5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ: ಷರತ್ತುಗಳೇನು.? ಇಲ್ಲಿದೆ ವಿವರ

    ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕೃತವಾಗಿ ಜಾರಿ ಮಾಡಿ ಘೋಷಣೆ ಮಾಡಿದರು. ಇಂದು(ಜೂನ್ 02) ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆ ಜಾರಿ ಬಗ್ಗೆ ವಿವರಿಸಿದರು. 5 ಗ್ಯಾರಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿ ಮಾಡಬೇಕು ಎಂದು ತೀರ್ಮಾನ ಮಾಡಲಾಗಿದ್ದು, ಯಾವುದೇ ಜಾತಿ, ಧರ್ಮ, ಭಾಷೆ ಬೇಧವಿಲ್ಲದೇ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಗ್ಯಾರಂಟಿ 1: ಗೃಹಜ್ಯೋತಿ ಜಾರಿಗೆಮೊದಲ ಗ್ಯಾರಂಟಿ ಗೃಹಜ್ಯೋತಿ ಜಾರಿಗೆ ಸಂಪುಟ ಸಭೆ ನಿರ್ಧರಿಸಿದ್ದು, ಎಲ್ಲರಿಗೂ 200 ಯುನಿಟ್​ ವರೆಗೂ ಉಚಿತವಾಗಿ ವಿದ್ಯುತ್ ನೀಡಲಾಗುವುದು. 12 ತಿಂಗಳ ಸರಾಸರಿ ಆಧಾರದಲ್ಲಿ ವಿದ್ಯುತ್​ ಬಿಲ್​ ಪರಿಗಣೆ ಮಾಡಲಾಗುತ್ತಿದ್ದು, 12 ತಿಂಗಳಲ್ಲಿ ಎಷ್ಟು ಬಳಸುತ್ತಾರೋ ಅದರ ಸರಾಸರಿ ಪಡೆದುಕೊಂಡು 10% ಹೆಚ್ಚು ವಿದ್ಯುತ್ ನೀಡುತ್ತೇವೆ. 12 ತಿಂಗಳ ಆವರೇಜ್​ ವಿದ್ಯುತ್ ಬಳಕೆ ಮೇಲೆ 10% ನೀಡುತ್ತೇವೆ. ಸರಾಸರಿ ಬಳಕೆಗೆ 10% ಸೇರಿಸಿ ಹೆಚ್ಚುವರಿ ವಿದ್ಯುತ್​ ನೀಡುತ್ತೇವೆ. 200 ಯೂನಿಟ್​ ವಿದ್ಯುತ್​ ಬಳಕೆಗೆ ಯಾವುದೇ ಶುಲ್ಕ ಇರುವುದಿಲ್ಲ. ಜುಲೈ 1ರಿಂದ ಆಗಸ್ಟ್​ 1ರವರೆಗೆ ಬಳಸುವ ವಿದ್ಯುತ್​ ಬಳಕೆಗೆ ಬಿಲ್​ ಎಂದು ತಿಳಿಸಿದರು. ಗ್ಯಾರಂಟಿ 2: ಗೃಹಲಕ್ಷ್ಮೀ ಯೋಜನೆಮನೆ ಯಜಮಾನಿಗೆ ತಿಂಗಳಿಗೆ 2000 ರೂ. ಜಮಾ ಮಾಡುತ್ತೇವೆ. ಹಾಗಾಗಿ ಈಗ ಅವರು ಅಕೌಂಟ್ ನಂಬರ್, ಆಧಾರ್ ಕಾರ್ಡ್ ಕೊಡಬೇಕು. ಅಲ್ಲದೇ ಇದಕ್ಕೆ ಆನ್​ಲೈನ್​ ಅರ್ಜಿ ಸಲ್ಲಿಸಬೇಕು. ಜೂನ್ 15ರಿಂದ ಜುಲೈ 15ರ ವರೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಬಳಿಕ ದಾಖಲೆಗಳನ್ನು ಪರಿಶೀಲಿಸಿ ಆಗಸ್ಟ್ 15ರಿಂದ ಮನೆ ಯಜಮಾನಿ ಬ್ಯಾಂಕ್​​ ಖಾತೆಗೆ ಹಣ ಹಾಕಲಾಗುವುದು. ಇದು ಬಿಪಿಎಲ್​ ಹಾಗೂ ಎಪಿಲ್ ಕಾರ್ಡುದಾರರಿಗೆ ಅನ್ವಯವಾಗಲಿದೆ ಎಂದರು. ಮನೆ ಯಜಮಾನಿ ಯಾರು ಎಂದು ಮನೆಯವರೇ ಹೇಳಿ ಅರ್ಜಿ ಸಲ್ಲಿಸಬೇಕು. ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಗೃಹ ಲಕ್ಷ್ಮೀ ಆಗಸ್ಟ್ ನಿಂದ ಜಾರಿ ಮಾಡಲಾಗುತ್ತದೆ. ಈಗಾಗಲೇ ಪಿಂಚಣಿ ಪಡೆಯುತ್ತಿರುವವರಿಗೂ ಗೃಹ ಲಕ್ಷ್ಮೀ ಯೋಜನೆ ಅನ್ವಯವಾಗಲಿದೆ ಎಂದು ಸ್ಪಷ್ಟಪಡಿಸಿದರು. ಅಂದರೆ ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವೀಕಲಕರಿಗೆ ಈಗಾಲೇ ಬರುತ್ತಿರುವ ಪಿಂಚಣಿ ಜೊತೆಗೆ ಈ ಎರಡು ಸಾವಿರ ರೂಪಾಯಿ ಮನೆ ಯಜಮಾನಿಗೆ ಸಿಗಲಿದೆ ಎಂದು ಹೇಳಿದರು. ಗ್ಯಾರಂಟಿ 3: ಅನ್ನಭಾಗ್ಯ ಯೋಜನೆಜುಲೈ 1ರಿಂದ ಎಲ್ಲಾ ಬಿಪಿಎಲ್​ ಕಾರ್ಡುದಾರರಿಗೆ 10 ಕೆಜಿ ಆಹಾರಧಾನ್ಯ ವಿತರಿಸುತ್ತೇವೆ. ಈಗಲೇ 10 ಕೆ.ಜಿ ಅಕ್ಕಿ ನೀಡಲು ನಮ್ಮಲ್ಲಿ ದಾಸ್ತಾನು ಇಲ್ಲ, ಹೀಗಾಗಿ ಆಹಾರಧಾನ್ಯ ನೀಡುತ್ತೇವೆ. ಗ್ಯಾರಂಟಿ 4: ಉಚಿತ ಬಸ್ ಯೋಜನೆಇನ್ನು ಉಚಿತ ಬಸ್ ಯೋಜನೆ ಅಡಿಯಲ್ಲಿ ಎಲ್ಲಾ ಅಂದರೆ ವಿದ್ಯಾರ್ಥಿನಿಯರು ಸೇರಿದಂತೆ ಮಹಿಳೆರಿಗೆ ಜೂನ್ 11ರಿಂದ ಉಚಿತ ಬಸ್ ಪ್ರಯಾಣ ಮಾಡಬಹುದು. ಎಸಿ ಮತ್ತು ಐಷಾರಾಮಿ ಬಸ್​ಗಳಲ್ಲಿ ಉಚಿತ ಪ್ರಯಾಣವಿಲ್ಲ. ಇನ್ನುಳಿದಂತೆ ರಾಜಹಂಸ, ಕೆಎಸ್​ಆರ್​ಟಿಸಿಯ ಎಲ್ಲಾ ಎಕ್ಸ್​ಪ್ರೆಸ್, ಬಿಎಂಟಿಸಿ ಬಸ್​ಗಳಲ್ಲಿ ಕರ್ನಾಟಕದೊಳಗೆ ಪ್ರಯಾಣಿಸಬಹುದು. ಗ್ಯಾರಂಟಿ 5: ಯುವ ನಿಧಿ2022-23ರ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಉತ್ತೀರ್ಣರಾಗಿ ನಿರುದ್ಯೋಗಿಗಳಾಗಿದ್ದರೆ ಅಂತವರಿಗೆ ‘ಯುವನಿಧಿ’ ಯೋಜನೆ ಅಡಿಯಲ್ಲಿ ತಿಂಗಳಿಗೆ 3000 ರೂ. ನೀಡಲಾಗುತ್ತದೆ. ಬಿಎ, ಬಿಎಸ್​ಸಿಸ, ಬಿಕಾಂ ಪದವೀಧರ 18ರಿಂದ 25 ವರ್ಷದೊಳಗಿನ ನಿರುದ್ಯೋಗಿಗಳಿಗೆ ಯುವನಿಧಿ ಲಾಭ ಸಿಗಲಿದೆ. 2022-23 ರಲ್ಲಿ ವ್ಯಾಸಂಗ ಮಾಡಿ ಪಾಸ್ ಆಗಿರುವ ಎಲ್ಲಾ ಪದವೀಧರರಿಗೆ 24 ತಿಂಗಳವರೆಗೆ ಪ್ರತಿ ತಿಂಗಳು 3000 ರೂ.ಡಿಪ್ಲೋಮಾ ಹೋಲ್ಡರ್ಸ್ ಗೆ 1500 ಪಾವತಿ ಮಾಡಲಾಗುತ್ತದೆ. 24 ತಿಂಗಳ ಒಳಗೆ ಖಾಸಗಿ ಅಥವಾ ಸರ್ಕಾರಿ ನೌಕರಿ ಪಡೆದರೆ ಆಗ ಹಣ ಪಾವತಿ‌ ಇಲ್ಲ. ನಿರುದ್ಯೋಗಿ ಎಂದು ಅರ್ಜಿ ಹಾಕಿ ನೋಂದಣಿ ಮಾಡಿಕೊಂಡವರಿಗೆ ಮಾತ್ರ ಹಣ ಸಿಗಲಿದೆ . ನೋಂದಣಿ ಮಾಡಿಕೊಂಡ 24 ತಿಂಗಳವರೆಗೆ ಪಾವತಿ ಮಾಡಲಾಗುತ್ತಿದ್ದು, ಟ್ರಾನ್ಸ್ ಜೆಂಡರ್ಸ್ ಗೆ ಕೂಡಾ ಯುವ ನಿಧಿ ಅನ್ವಯವಾಗಲಿದೆ.

    Latest Posts

    ನಾಳೆಯ ಕರ್ನಾಟಕ ಬಂದ್ ಗೆ ಕರಾವಳಿಯಿಂದ ಬೆಂಬಲ ಇಲ್ಲ : ದಿಲ್ ರಾಜ್ ಆಳ್ವ

    ಕಾವೇರಿ ನದಿ ನೀರಿನ ಹೋರಾಟ ನಾಳೆ ನಡೆಯಲಿರುವ ಕರ್ನಾಟಕ ಬಂದ್‌ಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್‌ ಮಾಡಿ ಜನರು ಕಾವೇರಿ ಹೋರಾಟಕ್ಕೆ...

    ಉಪ್ಪಿನಂಗಡಿ: 500 ರೂ. ಟಿಕೆಟ್ ಖರೀದಿಸಿದ್ದ ಮೇಸ್ತ್ರಿಗೆ ಒಲಿದ 50 ಲಕ್ಷ ಬಂಪರ್ ಕೇರಳ ಲಾಟರಿ

    ಉಪ್ಪಿನಂಗಡಿಯ ಮೇಸ್ತ್ರಿಯೊಬ್ಬರಿಗೆ ಕೇರಳ ಅದೃಷ್ಟ ಲಾಟರಿ ಒಲಿದಿದೆ. ಕಾನತ್ತೂರು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಇಳಂತಿಲ ನಿವಾಸಿ ಚಂದ್ರಯ್ಯ ಎಂಬುವವರು 500 ರೂಪಾಯಿಯ ಲಾಟರಿ ಟಿಕೆಟ್ ಖರೀದಿಸಿದ್ದರು. ಈ ಟಿಕೆಟ್‌ ಗೆ...

    ಸುಳ್ಯ : ಕೆವಿಜಿ ಪ್ರಿನ್ಸಿಪಾಲ್ ರಾಮಕೃಷ್ಣ ಕೊಲೆ ಪ್ರಕರಣ- ಕೆ.ವಿ.ಜಿ. ಪುತ್ರ ಡಾ.ರೇಣುಕಾಪ್ರಸಾದ್ ಸಹಿತ 6 ಮಂದಿ ದೋಷಿಗಳು.!

    ಬೆಂಗಳೂರು: 12 ವರ್ಷದ ಹಿಂದೆ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸುಳ್ಯ ಕೆವಿಜಿ ಪಾಲಿಟೆಕ್ನಿಕ್‌  ಪ್ರಾಂಶುಪಾಲರಾಗಿದ್ದ ಎ.ಎಸ್‌ ರಾಮಕೃಷ್ಣ  ಅವರ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಡಾ.ರೇಣುಕಾ ಪ್ರಸಾದ್‌ ...

    ಸೆ.30ರಂದು ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ನಗರ ಘಟಕದ ನೂತನ ಅಧ್ಯಕ್ಷ ಶರಣ್ ರಾಜ್ ಕೆ.ಆರ್ ರವರ ಪದಗ್ರಹಣ

    ಮಂಗಳೂರು: ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ನಗರ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶರಣ್ ರಾಜ್ ಕೆ.ಆರ್ ರವರ ಪದಗ್ರಹಣ ಕಾರ್ಯಕ್ರಮ ಸೆ.30 ಶನಿವಾರದಂದು ಬೆಳಗ್ಗೆ11.00 ಗಂಟೆಗೆ ವುಡ್ ಲ್ಯಾಂಡ್...

    Don't Miss

    ಚೈತ್ರಾ ಕುಂದಾಪುರ ಪ್ರಕರಣದ ಸುದ್ದಿ ಪ್ರಕಟಿಸುವಾಗ ಕುಂದಾಪುರ ಹೆಸರು ಬಳಸದಂತೆ ಮಾಧ್ಯಮಗಳಿಗೆ ನಿರ್ಬಂಧ

    ಬೆಂಗಳೂರು : ಎಂಎಲ್ಎ ಟಿಕೆಟ್ ಪ್ರಕರಣದಲ್ಲಿ ಕೋಟಿ ಕೋಟಿ ಹಣ ವಂಚನೆ ಮಾಡಿ ಸಿಕ್ಕಿಬಿದ್ದಿರುವ ಚೈತ್ರಾ ಕುಂದಾಪುರ ಪ್ರಕರಣದ ವರದಿ ವೇಳೆ ಕುಂದಾಪುರ ಹೆಸರು ಬಳಕೆ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ...

    ನಂತೂರು ಜಂಕ್ಷನ್‌ನಲ್ಲಿದ್ದ ರಸ್ತೆ ಹೊಂಡ ಮುಚ್ಚಿದ ಟ್ರಾಫಿಕ್ ಪೊಲೀಸರು

    ಮಂಗಳೂರು : ಮಂಗಳೂರು ನಗರದ ನಂತೂರು ಜಂಕ್ಷನ್‌ನಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟು ಮಾಡುತ್ತಿದ್ದ ಹೊಂಡ ಗುಂಡಿಗಳನ್ನು ಮಂಗಳೂರು ನಗರದ ಪೊಲೀಸ್ ಅಧಿಕಾರಿಗಳು ಸ್ವತಃ ಮುಚ್ಚುವ ಕಾರ್ಯ ಮಾಡಿ...

    ‘ಯಜಮಾನಿ ಮಹಿಳೆ’ಯರೇ ನಿಮಗೆ ಇನ್ನೂ ‘ಗೃಹಲಕ್ಷ್ಮಿ’ ಹಣ ಬಂದಿಲ್ವ? ಇಲ್ಲಿದೆ ಕಾರಣ

    ಬೆಂಗಳೂರು: ರಾಜ್ಯ ಸರ್ಕಾರದಿಂದ ನಾಲ್ಕನೇ ಗ್ಯಾರಂಟಿ ಯೋಜನೆಯಾಗಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಈಗಾಗಲೇ ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳ ಪ್ರೋತ್ಸಾಹ ಹಣವನ್ನು ಯಜಮಾನಿ ಮಹಿಳೆಯರ ಖಾತೆಗೆ 2000 ರೂ ಜಮಾ...

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಲಾರಿ ಚರಂಡಿಗೆ ಪಲ್ಟಿ

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ದಾಸಕೋಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಚಾಲಕ ಮತ್ತು ಕ್ಲೀನರ್ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಮಂಗಳೂರು: ಪುರಭವನದಲ್ಲಿ ಪ್ರಪ್ರಥಮ ಬಾರಿಗೆ ತುಳು ಭಾಗವತಿಕೆ ಸಹಿತ “ಸಿರಿ ದೇವಿ ಮಾತ್ಮೆ” ಎಂಬ ಸಂಪೂರ್ಣ ತುಳು ಯಕ್ಷಗಾನ

    ಮಂಗಳೂರು: ತುಳುವೆರೆ ಆಯನೊ ಕೊಟ ಕುಡ್ಲ (ರಿ.) ವತಿಯಿಂದ ಮಂಗಳೂರು ಪುರಭವನದಲ್ಲಿ ಪ್ರಪ್ರಥಮ ಬಾರಿಗೆ ತುಳು ಭಾಗವತಿಕೆ ಸಹಿತ ಯಕ್ಷಲೋಕದ ನಾಮಾಂಕಿತ ಕಲಾವಿದರ ಸಮಾಗಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಸರಪಾಡಿ...