ಮಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಇಂದು ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅವರಿಗೆ ಜಿಲ್ಲಾಡಳಿತದ ವತಿಯಿಂದ ಸ್ವಾಗತ ಕೋರಲಾಯಿತು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆಗಮಿಸಿದ್ದಾರೆ.ಇನ್ನು ಈ ವೇಳೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಜೈನ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಎಸ್ಪಿ ರಿಷ್ಯಂತ್, ಡಿಸಿಪಿ ಅನ್ಶುಕುಮಾರ್, ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
©2021 Tulunada Surya | Developed by CuriousLabs