Saturday, July 27, 2024
spot_img
More

    Latest Posts

    ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಪ್ರಚೋದನಾತ್ಮಕ ಸಂದೇಶಗಳನ್ನು ಪೋಸ್ಟ್‌-ಕಮಿಷನರ್ ಎಚ್ಚರಿಕೆ

    ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಫ‌ಲಿತಾಂಶ ಪ್ರಕಟವಾದ ಬಳಿಕ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಪ್ರಚೋದನಾತ್ಮಕ ಸಂದೇಶಗಳನ್ನು ಪೋಸ್ಟ್‌ ಮಾಡುತ್ತಿರುವುದು ಕಂಡು ಬರುತ್ತಿದ್ದು, ಇಂತಹ ಪೋಸ್ಟ್‌ಗಳನ್ನು ಹಾಕುವ ಅಥವಾ ಫಾರ್ವರ್ಡ್‌ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ಎಚ್ಚರಿಕೆ ನೀಡಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ ಅವರು, ಜಾತಿ, ಧರ್ಮ ಮತ್ತು ಪ್ರದೇಶ ಆಧಾರಿತವಾಗಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುವಂತಹ ಮತ್ತು ವೈಯಕ್ತಿಕ ನಿಂದನೆ ಮಾಡುವಂತಹ ದ್ವೇಷಪೂರಿತ ಮತ್ತು ಪ್ರಚೋದನಾತ್ಮಕ ಪೋಸ್ಟ್‌ಗಳ ಮೇಲೆ ನಿಗಾ ಇಡಲು ಸೋಶಿಯಲ್‌ ಮೀಡಿಯಾ ಮಾನಿಟರಿಂಗ್‌ ಸೆಲ್‌ ರಚಿಸಲಾಗಿದೆ ಎಂದರು.ಇನ್ನು ಈ ರೀತಿಯ ಸಂದೇಶ ಪೋಸ್ಟ್‌ ಮಾಡುವುದು, ಫಾರ್ವರ್ಡ್‌ ಮಾಡುವುದು, ಲೈಕ್‌, ಕಮೆಂಟ್‌ ಮಾಡುವುದು ಅಪರಾಧವಾಗಿದ್ದು ಈ ರೀತಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಯಾವುದೇ ಸುಳ್ಳು ಸುದ್ದಿ ಮತ್ತು ದ್ವೇಷದ ಸಂದೇಶಗಳಿಗೆ ಕಿವಿಗೊಡಬಾರದು ಎಂದು ತಿಳಿಸಿದ್ದಾರೆ

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss