ಮಂಗಳೂರು : ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ರೈಲ್ವೇ ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಯಂತ್ರ ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್ ಪಾರ್ಮ್ ನಿಂದ ಕೆಳಗೆ ರೈಲ್ವೇ ಹಳಿಗೆ ಉರುಳಿ ಬಿದ್ದಿದೆ. ಘಟನೆಯಿಂದ ಸದ್ಯ ಯಾವುದೇ ಪ್ರಾಣಾಪಾಯ ಅಗಿಲ್ಲ. ಅದೃಷ್ಟವಶಾತ್ ರೈಲು ಸಮಯದಲ್ಲಿ ಬರದೆ ಇದ್ದುದರಿಂದ ಯಾವುದೇ ಅವಘಡ ಸಂಭವಿಸಿಲ್ಲ. ರೈಲು ಆಗಮಿಸುವ ಮೊದಲು ಯಂತ್ರವನ್ನು ತೆರವುಗೊಳಿಸಬೇಕಾದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಗಜಲಕ್ಷ್ಮೀ ಕ್ರೇನ್ ನವರು ಕಾರ್ಯ ಪ್ರವೃತರಾಗಿ ತೆರವು ಕಾರ್ಯ ನಿರ್ವಹಿಸಿದರು.
©2021 Tulunada Surya | Developed by CuriousLabs