ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಜಲ್ಲಿ ಲಾರಿಯೊಂದು ಹರಿದಿದೆ.
ಅಪಘಾತಕ್ಕೊಳಗಾದ ಮೂವರಿಗೆ ಭಾರಿ ಪೆಟ್ಟಾಗಿದೆ. ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ. ಸಾಗರದ ಸಣ್ಣಮನೆ ಬಳಿ ನಡೆದ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಸಾಗರ ಟೌನ್ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಕೂಡಲೇ ವಿದ್ಯಾರ್ಥಿನಿಯರನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಇವರಾಗಿದ್ದೆ. ಅಂಕಿತಾ, ಪ್ರತಿಮಾ, ಐಶ್ವರ್ಯಾ ಗಾಯಗೊಂಡವರಾಗಿದ್ದಾರೆ. ಇವರಲ್ಲಿ ಅಂಕಿತಾ ಅವರ ಸ್ಥಿತಿ ತೀವ್ರ ಚಿಂತಾಜನಕವಾಗಿದೆ.
