ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಸುಧಾಕರ್ ಅವರು ಇಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತಗೆ ಮಹತ್ವದ ಸಭೆ ನಡೆಸಲಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಗೆ ಆರೋಗ್ಯ ಸೌಧದಲ್ಲಿ ಸಚಿವ ಸುಧಾಕರ್ ಅವರು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆಗೆ ಸಭೆ ನಡೆಸಲಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ 2ಕ್ಕಿಂತ ಹೆಚ್ಚಾದ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮ ಕೈಗೊಳ್ಳುವ ಕುರಿತಂತೆ ಸುಧಾಕರ್ ಸಭೆ ನಡೆಸಲಿದ್ದಾರೆ.
ಇನ್ನೂ ನಿನ್ನೆ ಬೆಂಗಳೂರಿನಲ್ಲಿ 429, ಬಳ್ಳಾರಿ, ಚಿತ್ರದುರ್ಗ, ಗದಗ, ಹಾಸನ ಮತ್ತು ರಾಯಚೂರು ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೋನಾ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ 06, ಉಡುಪಿ 03, ಧಾರವಾಡ 04, ದಾವಣಗೆರೆ 02 ಸೇರಿದಂತೆ ರಾಜ್ಯದಲ್ಲಿ 24 ಗಂಟೆಯಲ್ಲಿ 463 ಮಂದಿಗೆ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 3656334ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 199 ಸೇರಿದಂತೆ ಇದುವರೆಗೆ 3912575 ಸೋಂಕಿತರು ಗುಣಮುಖರಾಗಿದ್ದಾರೆ. ಇದರಿಂದ ರಾಜ್ಯದಲ್ಲಿ ಈಗ 3651 ಸಕ್ರೀಯ ಸೋಂಕಿತರು ಇರೋದಾಗಿ ತಿಳಿಸಿದೆ.
