Friday, April 26, 2024
spot_img
More

    Latest Posts

    ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಮಳೆ ಹಿನ್ನಲೆ: ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ – CM ಬೊಮ್ಮಾಯಿ

    ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ( Costal Karnataka ) ಅಧಿಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.

    ಇಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವೆಡೆ ಹಾಗೂ ಕರಾವಳಿ ಭಾಗದಲ್ಲಿ ಪುನ: ಹೆಚ್ಚು ಮಳೆಯಾಗುತ್ತಿದೆ. ಮಳೆ ಅನಾಹುತದಿಂದ ಸಾವು ನೋವುಗಳಾಗಿದ್ದು, ಈ ಬಗ್ಗೆ ಇಂದು ಸಭೆ ನಡೆಸಲಾಗುವುದು. ಹೆಚ್ಚು ಮಳೆಯಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.ರಾಜ್ಯದಲ್ಲಿ ಕಾಣಿಸಿಕೊಳ್ಳುತ್ತಿರುವ ಮಂಕಿಪಾಕ್ಸ್ ಸೋಂಕು ನಿಯಂತ್ರಣದ ಬಗ್ಗೆಯೂ ಸಭೆ ನಡೆಸಲಾಗುವುದು. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಸಿಐಐಎ ನ ಕಲ್ಚರಲ್ ವಿಂಗ್ ನ ಸಭೆಗಾಗಿ ಆಗಸ್ಟ್ 4 ರಂದು ಬೆಂಗಳೂರಿಗೆ ಆಗಮಿಸುತ್ತಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss