Tuesday, July 16, 2024
spot_img
More

  Latest Posts

  ಸೌಜನ್ಯ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ವಾರ್ನಿಂಗ್

  ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ವಿಚಾರ ಮುಂದಿಟ್ಟುಕೊಂಡು ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರ ವಿರುದ್ಧ ಹೇಳಿಕೆ ನೀಡದಂತೆ ಉಜಿರೆಯ ಮಹೇಶ್ ಶೆಟ್ಟಿ ತಿಮ್ಮರೋಡಿ ಅವರಿಗೆ ಅಧೀನ ನ್ಯಾಯಾಲಯ ನೀಡಿರುವ ಪ್ರತಿಬಂಧಕಾದೇಶ ಉಲ್ಲಂಘನೆ ಆಗದ ರೀತಿ ನೋಡಿಕೊಳ್ಳುವಂತೆ ಸರಕಾರ ಹಾಗೂ ಗೃಹ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

  ಅಧೀನ ನ್ಯಾಯಾಲಯದ ಆದೇಶ ಉಲ್ಲಂಘಿಸುತ್ತಿರುವ ಉಜಿರೆಯ ಮಹೇಶ್ ತಿಮ್ಮರೊಡಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಹೈಕೋರ್ಟ್‌ಗೆ ತಕ ರಾರು ಅರ್ಜಿ ಸಲ್ಲಿಸಲಾಗಿದೆ.
  ಅರ್ಜಿ ಸಂಬಂಧ ಕೆಲ ಕಾಲ ವಾದ ಆಲಿ ಸಿದ ನ್ಯಾ|ಕೃಷ್ಣ ಎಸ್‌. ದೀಕ್ಷಿತ್ ಅವರ ಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾವ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾವ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರು, ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ, ಬಂಟ್ವಾಳ ಡಿವೈಎಸ್ಪಿ, ಬೆಳ್ತಂಗಡಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾಧಿಕಾರಿಗಳು, ಮಹೇಶ್ ಶೆಟ್ಟಿ ತಿಮ್ಮರೊಡಿ ಅವರಿಗೆ ನೋಟಿಸ್ ಜಾರಿಗೊಳಿಸಿತು.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss