Thursday, October 10, 2024
spot_img
More

    Latest Posts

    ಮಂಗಳೂರು: ಬೆಳೆ ವಿಮೆ ಯೋಜನೆ: ಅರ್ಜಿ ಆಹ್ವಾನ

    ಮಂಗಳೂರು: ಬೆಳೆ ವಿಮೆ ಯೋಜನೆ 2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ತೋಟಗಾರಿಕೆ ಬೆಳೆ ಬೆಳೆದ ರೈತರ ಹವಾಮಾನ ವೈಪರಿತ್ಯದಿಂದ ಬೆಳೆ ನಷ್ಟ ಸಂಭವಿಸದಲ್ಲಿ ಪರಿಹಾರವನ್ನು ತುಂಬಿಸಿಕೊಡುವ ನಿಟ್ಟಿನಲ್ಲಿ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದೆ.ಈ ಯೋಜನೆಯಡಿ ನೋಂದಾವಣೆಗೊಳ್ಳಲು ಬೆಳೆಸಲಾಗುವ ಬೆಳೆಯ ರೈತರ ಸರ್ವೇ ನಂಬರ್‍ನಲ್ಲಿ ಬೆಳೆ ಸಮೀಕ್ಷೆಯಡಿ ನಮೂದಾಗಿರುವುದು ಕಡ್ಡಾಯವಾಗಿದೆ. ಬೆಳೆ ಸಮೀಕ್ಷೆಯಡಿ ವಿಮೆ ಮಾಡಿಸಲಾಗುವ ಬೆಳೆಯು ನಮೂದಾಗದಿದ್ದ ಪಕ್ಷದಲ್ಲಿ ಇದೇ ಸೆ.15ರೊಳಗೆ ಬೆಳೆ ಸಮೀಕ್ಷೆ ಮಾಡಿ ಬೆಳೆ ನಮೂದಿಸಲಾಗುವುದೆಂದು ರೈತರಿಂದ ಒಪ್ಪಿಗೆ ಪತ್ರ ಪಡೆದು ಈ ಯೋಜನೆಯಡಿ ರೈತರನ್ನು ನೋಂದಾಯಿಸಲಾಗುವುದು.ತಪ್ಪಿದ್ದಲ್ಲಿ ಅಂತಹ ರೈತರ ನೋಂದಾವಣೆಯನ್ನು ತಿರಸ್ಕೃತರಿಸಲಾಗುವುದು. ಆದ್ದರಿಂದ ಅಂತಹ ರೈತರು ತಾವೇ ಖುದ್ದಾಗಿ ಅಥವಾ ಬೆಳೆ ಸಮೀಕ್ಷೆ ಕೈಗೊಳ್ಳಲು ತಮ್ಮ ಗ್ರಾಮಕ್ಕೆ ನಿಯೋಜಿತರಾಗಿರುವ ಖಾಸಗಿ ನಿವಾಸಿಗಳ ಮುಖಾಂತರ ಬೆಳೆ ಸಮೀಕ್ಷೆ ಕೈಗೊಂಡು ವಿಮೆ ಮಾಡಿಸಿರುವ ಬೆಳೆಯನ್ನು ಬೆಳೆ ಸಮೀಕ್ಷೆಯಲ್ಲಿ ನೋಂದಾಯಿಸಿಕೊಳ್ಳಬೇಕು.ಹೆಚ್ಚಿನ ಮಾಹಿತಿಗೆ ತಾಲೂಕು ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss