Saturday, April 20, 2024
spot_img
More

    Latest Posts

    ರಾಯಚೂರು: ಟೈರ್​ ಬ್ಲಾಸ್ಟ್​ ಆಗಿ ಕಂದಕಕ್ಕೆ ಉರುಳಿದ ಕ್ರೂಸರ್​ – ಮಹಿಳೆ ಸಾವು!

    ರಾಯಚೂರು: ಕೂಲಿ ಕಾರ್ಮಿಕರಿದ್ದ ಕ್ರೂಸರ್ ಪಲ್ಟಿಯಾದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬೊಮ್ಮನಾಳ ಕ್ರಾಸ್ ಬಳಿ ನಡೆದಿದೆ.

    ಘಟನೆಯಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಹತ್ತಿ ಬಿಡಿಸಲು ಕೂಲಿ ಕಾರ್ಮಿಕರನ್ನ ಕ್ರೂಸರ್ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಕ್ರೂಸರ್ ಟೈಯರ್ ಬ್ಲಾಸ್ ಆಗಿದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಮೃತ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ.

    ವಾಹನ ಪಲ್ಟಿ ಹೊಡೆದು ಉಲ್ಟಾ ಬಿದ್ದಿದ್ದರಿಂದ ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss