ಚಿಕ್ಕಮಗಳೂರು: ಮೂರು ದಶಕಗಳ ಹಿಂದೆ ಬಾಬರಿ ಧ್ವಂಸ ಸಂದರ್ಭ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಶ್ರೀಕಾಂತ್ ಪೂಜಾರಿ ಎಂಬಾತನನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಮಾಜಿ ಸಚಿವ ಸಿ.ಟಿ.ರವಿ ‘ನಾನೂ ಕರಸೇವಕ, ನನ್ನನ್ನು ಬಂಧಿಸಿ’ ಎಂದು ಬರೆದಿರುವ ಭಿತ್ತಿಪತ್ರ ಹಿಡಿದು ಗುರುವಾರ ಚಿಕ್ಕಮಗಳೂರು ನಗರ ಠಾಣೆ ಎದುರು ಏಕಾಂಗಿ ಧರಣಿ ನಡೆಸಿದರು.
ಕೆಲವು ಕಾರ್ಯಕರ್ತರೊಂದಿಗೆ ಆಗಮಿ ಸಿದ ಅವರು ಪೊಲೀಸ್ ಠಾಣೆಯ ಮುಂಭಾಗ ‘ನಾನು ಕ್ರಿ.ಶ.1992 ಡಿ.6ರ ಅಯೋಧ್ಯೆ ಶ್ರೀರಾಮ ಮಂದಿರದ ಕರಸೇವಕ, ನನ್ನನ್ನೂ ಬಂಧಿಸಿ’ ಎಂಬ ಭಿತ್ತಿಪತ್ರವನ್ನು ಹಿಡಿದು ನಗರ ಪೊಲೀಸ್ ಠಾಣೆ ಮುಂಭಾಗ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಠಾಣೆಯ ಗೇಟ್ ಆವರಣದಲ್ಲಿದ್ದ ಕಾರ್ಯಕರ್ತರು ಸಿ.ಟಿ.ರವಿ ಪ್ರತಿಭಟನೆಗೆ ಸಾಥ್ ನೀಡಿದರು.
ಈ ವೇಳೆ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ವೇಳೆ ಹೆಚ್ಚುವರಿ ಎಸ್ಪಿ ಕೃಷ್ಣ ಮೂರ್ತಿಯವರು ಸಿ.ಟಿ.ರವಿಯನ್ನು ಪೋಲಿಸ್ ಠಾಣೆ ಒಳಗೆ ಕರೆದುಕೊಂಡು ಹೋದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ನಾವೂ ಕರ ಸೇವಕರು, ನಮ್ಮನ್ನು ಬಂಧಿಸಿ ಎಂದು ಠಾಣೆಗೆ ಮುತ್ತಿಗೆ ಹಾಕಲು ಮುಂದಾದರು. ಈ ಸಂದರ್ಭ ಬಿಜೆಪಿ ಕಾರ್ಯಕ ರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ, ತಳ್ಳಾಟ, ನೂಕಾಟ ನಡೆಯಿತು. ನಂತರ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಠಾಣೆಯ ಆವರಣದಿಂದ ಹೊರಗೆ ಕಳಿಸಿದರು.
Trending
- ಮಂಗಳೂರಿನಲ್ಲಿ ಸ್ಪೆಷಲ್ ಆಕ್ಷನ್ ಪೋರ್ಸ್ ಕಾರ್ಯಪಡೆ ಕಚೇರಿ ಉದ್ಘಾಟಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ್
- ಸುರತ್ಕಲ್ ಪೊಲೀಸ್ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ರಾಗಿ ಅಧಿಕಾರ ಸ್ವೀಕರಿಸಿದ ದಕ್ಷ ಪೊಲೀಸ್ ಅಧಿಕಾರಿ ಪ್ರಮೋದ್ ಕುಮಾರ್
- ಪಶ್ಚಿಮ ವಲಯದ 4 ಜಿಲ್ಲೆಗಳ ಕಾನೂನು ಮತ್ತು ಸುವ್ಯವಸ್ಥೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ
- ರಾಜ್ಯ ಸರಕಾರದ 2 ವರ್ಷಗಳ ಸಂಭ್ರಮ: ಮಾಹಿತಿ ಪ್ರದರ್ಶನ
- ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ನಿರಂತರ ಶ್ರಮ ಅಗತ್ಯ
- ಪಿಲಿಕುಳ ಜೂನ್ 14 ರಿಂದ ಹಣ್ಣುಗಳ ಮೇಳ
- ಸರ್ಜರಿ ಇಲ್ಲದೆ ವಕ್ರಪಾದ ಸಮಸ್ಯೆ ನಿವಾರಣೆ – ಡಾ.ಕೆ.ಆರ್ ಕಾಮತ್
- ಹೋಟೆಲ್ಗಳಲ್ಲಿ ಗ್ರಾಹಕರಿಗೆ ಸುರಕ್ಷಿತ ಕುಡಿಯುವ ನೀರು: ಜಿ.ಪಂ ಸಿ.ಇ.ಒ ಸೂಚನೆ