Tuesday, September 17, 2024
spot_img
More

    Latest Posts

    ಮಾಂಡೌಸ್ ಚಂಡಮಾರುತ: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

    ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವುಂಟಾಗಿ ಮಾಂಡೌಸ್ ಚಂಡಮಾರುತದ ಅಬ್ಬರಕ್ಕೆ ಕರ್ನಾಟಕದಲ್ಲಿ ಇನ್ನೂ ಮೂರು ದಿನಗಳ ಕಾಲ ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಜಿಟಿ ಜಿಟಿ ಮಳೆ ಶೀತ ಗಾಳಿಯಿಂದ ಜನ ತತ್ತರಿಸಿದ್ದು, ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ.

    ಬೆಂಗಳೂರು ನಗರ, ಗ್ರಾಮಾಂತರ, ಕೊಡಗು, ಕೋಲಾರ, ಚಿಕ್ಕಮಗಳೂರು, ಧಾರವಾಡ, ಗದಗ, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಾಳೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

    ಇಂದು ಚಿಕ್ಕಮಗಳೂರು, ಕೊಡಗು, ಚಾಮರಾಜನಗರದಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಮಂಡ್ಯ, ಮೈಸೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರ್ಗಿ, ಹಾವೇರಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಕಲಬುರ್ಗಿ, ದಾವಣಗೆರೆ, ಚಿಕ್ಕಬಳ್ಳಾಪುರ ಕೊಡಗು, ಕೋಲಾರ, ರಾಮನಗರ, ತುಮಕೂರು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss