ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 9 ತಿಂಗಳ ಮಗು ಸೇರಿ 7 ಜನರು ಗಂಭಿರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಲ್ ತಾಲೂಕಿನಲ್ಲಿ ನಡೆದಿದೆ.
ಇಲ್ಲಿನ ಅಕ್ಕತಂಗೇರಹಾಳದ ಮನೆಯಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ ಗ್ಯಾಸ್ ಸಿಲಿಂಡರ್ ಲೀಕ್ ಆಗಿರಬಹುದು ಎನ್ನಲಾಗಿದೆ.
ಇಂದು ಬೆಳಿಗ್ಗೆ ಅಡುಗೆ ಮನೆಯಲ್ಲಿ ಸಿಲಿಂಡರ್ ಆನ್ ಮಾಡುತ್ತಿದ್ದಂತೆ ಸ್ಫೋಟಗೊಂಡಿದೆ. ಘಟನೆಯಲ್ಲಿ ಅಶೋಕ ನಿರ್ವಾಣಿ, ರಾಜಶ್ರೀ ನಿರ್ವಾಣಿ, 9 ತಿಂಗಳ ಮಗು ಸೇರಿದಂತೆ 7 ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.