ಮಂಗಳೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಧಿಕಾರಿಗೆ ಇಂದು ಶಾಲೆಗೆ ರಜೆ ಘೋಷಿಸಿದ್ದಾರೆ.
ಅಸನಿ ಚಂಡ ಮಾರುತದ ಪರಿಣಾಮ ಕರಾವಳಿಯಲ್ಲಿ ಮೂರು ದಿನಗಳಿಂದ ಮಳೆ ಸುರಿಯುತ್ತಿದೆ. ಕಳೆದ ಎರಡು ದಿನಗಳಿಂದ ಆರೆಂಜ್ ಅಲರ್ಟ್ ಹಾಗೂ ಇಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ನಿನ್ನೆ ಸಂಜೆಯಿಂದಲೇ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಇಂದು ಕೂಡಾ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.
ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.