ಮಂಗಳೂರು: ಮಂಗಳೂರಿನ ಪ್ರಸಿದ್ಧ ಮೂತ್ರಶಾಸ್ತ್ರದ ತಜ್ಞರು (ಯುರೋಲಜಿಸ್ಟ್) ಡಾ.ಜಿ.ಜಿ. ಲಕ್ಷ್ಮಣ ಪ್ರಭು(61) ನಿಧನರಾಗಿದ್ದಾರೆ. ವಾರದ ಹಿಂದೆ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿರುವಾಗ ಹೃದಯಾಘಾತಕ್ಕೆ ಒಳಗಾಗಿದ್ದರು. ಆ ಬಳಿಕ ಅವರು ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಇಂದು ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ.
ಇವರು 36 ವರ್ಷಗಳಿಗೂ ಹೆಚ್ಚು ಅನುಭವ ಹೊಂದಿದ್ದ ಅವರು ಹಲವು ವರ್ಷಗಳ ಕಾಲ ಕೆಎಂಸಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ್ದರು. ಹಲವಾರು ಸಂಕೀರ್ಣ ವೈದ್ಯಕೀಯ ಪ್ರಕರಣಗಳನ್ನು ನಿರ್ವಹಿಸಿದ್ದ ಅವರು, ಯುರೊಲಿಥಿಯಾಸಿಸ್, ಆಂಡ್ರಾಲಜಿ, ಯುರೊಡೈನಾಮಿಕ್ಸ್, ರೆಕಾನ್-ಯೂರಾಲಜಿ, ಯುರೊಜಿನೆಕಾಲಜಿ ಮತ್ತು ಎಂಡೋರಾಲಜಿಯಲ್ಲಿ ಪರಿಣತಿಯನ್ನು ಹೊಂದಿದ್ದರು.