Saturday, July 27, 2024
spot_img
More

    Latest Posts

    ಬೆಳ್ತಂಗಡಿ: BSNL ನಿವೃತ್ತ ಉದ್ಯೋಗಿ ಪಿ. ಡೀಕಯ್ಯ ಅವರ ಸಾವಿನ ಬಗ್ಗೆ ಸಿಒಡಿ ತನಿಖೆಗೆ ರಾಜ್ಯ ಸರಕಾರ ಆದೇಶ

    ಬೆಳ್ತಂಗಡಿ: ಹಿರಿಯ ದಲಿತ ನಾಯಕ, ಬಹುಜನ ಚಳವಳಿಯ ನೇತಾರ, ಬಿಎಸ್ಸೆನ್ನೆಲ್‌ ನಿವೃತ್ತ ಉದ್ಯೋಗಿ ಪಿ. ಡೀಕಯ್ಯ ಅವರ ಸಾವಿನ ಬಗ್ಗೆ ಸಿಒಡಿ ತನಿಖೆಗೆ ರಾಜ್ಯ ಸರಕಾರ ಆದೇಶಿಸಿದೆ.

    ಕಳೆದ ಜುಲೈ 6ರಂದು ಮನೆಯಲ್ಲಿ ಒಬ್ಬಂಟಿಯಾಗಿದ್ದ ಪಿ.ಡೀಕಯ್ಯ ಅವರು ಕುಸಿದು ಬಿದ್ದು ತಲೆಗೆ ಗಾಯಗೊಂಡ ಸ್ಥಿತಿಯಲ್ಲಿದ್ದ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಆದರೆ ಎರಡು ದಿನಗಳ ಬಳಿಕ ಅವರು ನಿಧನ ಹೊಂದಿದ್ದರು.

    ಮನೆಯವರ ಒಪ್ಪಿಗೆಯಂತೆ ಅಂಗಾಂಗಗಳ ದಾನ ಮಾಡಿದ ಬಳಿಕ ಜು. 9ರಂದು ಬೌದ್ಧ ಧರ್ಮದ ಪ್ರಕಾರ ತಾಲೂಕಿನ ಕಣಿಯೂರು ಗ್ರಾಮದ ಪೊಯ್ಯದಲ್ಲಿ ದಫ‌ನ ಕಾರ್ಯ ನಡೆದಿತ್ತು.

    ಆ ಬಳಿಕ ಜು. 15ರಂದು ಪಿ. ಡೀಕಯ್ಯ ಅವರ ಮನೆಯವರು ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಬೆಳ್ತಂಗಡಿ ಪೋಲಿಸ್‌ ಠಾಣೆಗೆ ದೂರು ನೀಡಿದ್ದರು. ಹೀಗಾಗಿ ಜು. 18ರಂದು ತಹಶೀಲ್ದಾರ್‌ ಅವರ ನೇತೃತ್ವದಲ್ಲಿ ಶವವನ್ನು ಹೊರತೆಗೆದು ವೈದ್ಯರಿಂದ ಶವ ಪರೀಕ್ಷೆ ಮಾಡಲಾಗಿತ್ತು.

    ಘಟನೆಯ ಬಗ್ಗೆ ವಿಸ್ತೃತ ತನಿಖೆ ನಡೆಸಿದ ಬೆಳ್ತಂಗಡಿ ಪೋಲಿಸರು ಮನೆಯವರ ದೂರಿನ ಆಧಾರದಲ್ಲಿ ತನಿಖೆ ನಡೆಸಿ ಹಲವರನ್ನು ತನಿಖೆಗೆ ಒಳಪಡಿಸಿದರು. ಈ ಮಧ್ಯೆ ಡೀಕಯ್ಯ ಅವರ ಕುಟುಂಬಸ್ಥರು ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿ ಪ್ರಕರಣದ ಬಗ್ಗೆ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂದು ಸಿಒಡಿ ತನಿಖೆಗೆ ಒತ್ತಾಯಿಸಿದ್ದರು. ಇದೀಗ ನ. 4ರಂದು ಘಟನೆಯ ಬಗ್ಗೆ ರಾಜ್ಯ ಸರಕಾರ ಸಿಒಡಿ ತನಿಖೆಗೆ ಆದೇಶಿಸಿದೆ. ಬೆಳ್ತಂಗಡಿ ಪೊಲೀಸ್‌ ಠಾಣೆಯಿಂದ ಪ್ರಕರಣದ ದಾಖಲೆಗಳನ್ನು ಸಿಒಡಿ ಇಲಾಖೆಗೆ ಒಪ್ಪಿಸುವಂತೆ ಆದೇಶಿಸಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss