Saturday, October 12, 2024
spot_img
More

    Latest Posts

    ಮಂಗಳೂರು: ಲಂಚಕ್ಕೆ ಬೇಡಿಕೆ – ಭೂಮಾಪಕನಿಗೆ ಜೈಲು ಶಿಕ್ಷೆ

    ಮಂಗಳೂರು: ಲಂಚದ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಭೂಮಾಪಕನಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.

    ಪುತ್ತೂರು ಭೂಮಾಪನ ಇಲಾಖೆಯಲ್ಲಿ ಭೂಮಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದ ಮಹಾದೇವ ನಾಯಕ್‌ ಶಿಕ್ಷೆಗೊಳಗಾ ದವನು. ಈತ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಜಮೀನಿನ ಅಳತೆ ಮಾಡಿ ನಕ್ಷೆ ತಯಾರಿಸಿ ಕೊಡಲು ವ್ಯಕ್ತಿಯೋರ್ವರಿಂದ ಲಂಚದ ಹಣಕ್ಕೆ ಬೇಡಿಕೆ ಇಟ್ಟ ಬಗ್ಗೆ 2014ರ ಮಾ.15ರಂದು ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದಲ್ಲಿ ಮೊಕದ್ದಮೆ ದಾಖಲಾಗಿತ್ತು.

    ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಅವರು ವಿಚಾರಣೆ ನಡೆಸಿ ಅ. 7ರಂದು ಅಂತಿಮ ತೀರ್ಪು ನೀಡಿದ್ದಾರೆ. ಆರೋಪಿ ಮಹಾದೇವ ನಾಯಕ್‌ಗೆ 3 ವರ್ಷ 3 ತಿಂಗಳ ಸಾದಾ ಸಜೆ ಹಾಗೂ 20,000 ರೂ. ದಂಡ ವಿಧಿಸಿದ್ದಾರೆ. ಒಂದು ವೇಳೆ ದಂಡ ಕಟ್ಟಲು ವಿಫ‌ಲನಾದರೆ 3 ತಿಂಗಳ ಹೆಚ್ಚುವರಿ ಸಾದಾ ಸಜೆ ವಿಧಿಸಿ ಆದೇಶ ಹೊರಡಿಸಿದ್ದಾರೆ.

    ಲೋಕಾಯುಕ್ತ ಮಂಗಳೂರಿನ ಪೊಲೀಸ್‌ ನಿರೀಕ್ಷಕರಾಗಿದ್ದು ಹಾಲಿ ಕಾರ್ಕಳ ಉಪ ವಿಭಾಗದ ಪೊಲೀಸ್‌ ಉಪನಿರೀಕ್ಷಕರಾಗಿರುವ ಎಸ್‌. ವಿಜಯ ಪ್ರಸಾದ್‌ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ಅವರು ಸರಕಾರದ ಪರವಾಗಿ ವಾದ ಮಂಡಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss