Friday, April 26, 2024
spot_img
More

    Latest Posts

    ಮಂಗಳೂರು: ಅನೈತಿಕ ಪೊಲೀಸ್ ಗಿರಿ- ನಾಲ್ವರು ಆರೋಪಿಗಳ ಬಂಧನ

    ಮಂಗಳೂರು ನಗರದಲ್ಲಿ ಇಬ್ಬರು ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್‌ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಇಂದು ಬಂಧಿಸಿದ್ದಾರೆ‌. ಬಂಧಿತರನ್ನು ಪ್ರಕಾಶ್, ರಾಘವೇಂದ್ರ, ರಂಜಿತ್, ಪವನ್ ಎಂದು ಗುರುತಿಸಲಾಗಿದೆ. ಈ ನಾಲ್ವರು ಆರೋಪಿಗಳು ಮಂಗಳೂರು ನಗರ ಹೊರವಲಯದ ವಾಮಂಜೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ – ವಿದ್ಯಾರ್ಥಿನಿ ಜತೆಯಾಗಿ ಉಡುಪಿಗೆ ತೆರಳುವ ಬಸ್ಸಿನಲ್ಲಿ ಕುಳಿತಿದ್ದುದನ್ನು ಕಂಡು ಬಸ್ಸಿನೊಳಗೆ ನುಗ್ಗಿ ವಿದ್ಯಾರ್ಥಿಗಳನ್ನು ತರಾಟೆಗೆ ತೆಗೆದು ಬಲವಂತವಾಗಿ ಕೆಳಗಿಳಿಸಿ ಮಾನಸಿಕ ಹಿಂಸೆ ನೀಡಿದ್ದರು. ಅಲ್ಲದೇ ವಿದ್ಯಾರ್ಥಿಯ ಗುರುತಿನ ಚೀಟಿ ಮತ್ತು ವಿಳಾಸವನ್ನು ಕೇಳಿ ಸಾರ್ವಜನಿಕವಾಗಿ ಬೆದರಿಸಿದ್ದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss