Tuesday, July 16, 2024
spot_img
More

    Latest Posts

    ಯಾವುದೇ ಒಬ್ಬ ವ್ಯಕ್ತಿಯ ವಿಚಾರಣೆ ನಡೆಸದೆ ಬಂಧನದ ಅವಧಿ ವಿಸ್ತರಣೆ ಅಕ್ಷಮ್ಯ : ಸುಪ್ರೀಂ ಕೋರ್ಟ್

    ನವದೆಹಲಿ: ಯಾವುದೇ ಒಬ್ಬ ವ್ಯಕ್ತಿಯ ವಿಚಾರಣೆ ನಡೆಸದೆ ಅಥವಾ ನ್ಯಾಯಾಲಯದ ಸೂಚನೆ ಇಲ್ಲದೆಯೇ ಬಂಧನದ ಅವಧಿಯನ್ನು ವಿಸ್ತರಿಸುವುದು ಅಕ್ಷಮ್ಯ. ಇದು ಆತನ ವೈಯಕ್ತಿಕ ಸ್ವಾತಂತ್ರ್ಯದ ಹರಣವಾಗಲಿದೆ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ.

    ತನ್ನ ಅಭಿಪ್ರಾಯ ಆಲಿಸದೇ ಎರಡು ಬಾರಿ ಬಂಧನದ ಅವಧಿ ವಿಸ್ತರಿಸಿದ್ದ ಪೊಲೀಸ್‌ ಅಧಿಕಾರಿಗಳ ಕ್ರಮ ಪ್ರಶ್ನಿಸಿ ಪ್ರಕಾಶ್‌ ಚಂದ್ರ ಯಾದವ್‌ ಅಲಿಯಾಸ್‌ ಮುಂಗೇರಿ ಯಾದವ್‌ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠವು ಈ ಆದೇಶ ಹೊರಡಿಸಿದೆ.

    ಜಾರ್ಖಂಡ್‌ನ ಅಪರಾಧ ನಿಯಂತ್ರಣ ಕಾಯ್ದೆಯಡಿ ‘ಸಮಾಜ ಘಾತುಕ ವ್ಯಕ್ತಿ’ ಎಂಬ ಆರೋಪದ ಮೇಲೆ ಯಾದವ್‌ ಅವರನ್ನು ಬಂಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್‌ ಹೈಕೋರ್ಟ್‌ ವಜಾಗೊಳಿಸಿತ್ತು. ಹಾಗಾಗಿ, ಅವರು ‘ಸುಪ್ರೀಂ’ಗೆ ಅರ್ಜಿ ಸಲ್ಲಿಸಿದ್ದರು.

    ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್‌ ಮತ್ತು ಸುಧಾಂಶು ಧೂಲಿಯಾ ಅವರಿದ್ದ ಪೀಠವು, ‘ಸಲಹಾ ಮಂಡಳಿ ಮುಂದೆ ಹಾಜರುಪಡಿಸದೆ ಯಾವುದೇ ವ್ಯಕ್ತಿಯ ಬಂಧನದ ಅವಧಿಯನ್ನು ವಿಸ್ತರಿಸುವಂತಿಲ್ಲ. ಜೊತೆಗೆ, ಮೂರು ತಿಂಗಳಿಗೂ ಹೆಚ್ಚು ಕಾಲ ಬಂಧನದಲ್ಲಿ ಇಡುವಂತಿಲ್ಲ. ಇದು ಆರೋಪಿಗಳ ಬಂಧನಕ್ಕೆ ಸಂಬಂಧಿಸಿದಂತೆ ರಚಿಸಿರುವ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಲಿದೆ’ ಎಂದು ಹೇಳಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss