Saturday, April 20, 2024
spot_img
More

  Latest Posts

  ದ.ಕ. ಉಡುಪಿ, ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷರಾಗಿ ಡಾ| ದೇವಿಪ್ರಸಾದ್ ಶೆಟ್ಟಿ ಆಯ್ಕೆ

  ಮಂಗಳೂರು: ದಕ್ಷಿಣ ಕನ್ನಡ,ಉಡುಪಿ,ಹಾಗೂ ಕಾಸರಗೋಡು ಜಿಲ್ಲಾ ಕಂಬಳ ಸಮಿತಿಯ ಸರ್ವ ಸದಸ್ಯರ ಸಭೆಯಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ಸಮಿತಿಯ ಅಧ್ಯಕ್ಷರಾಗಿ ಐಕಳ ಬಾವ ಡಾ|| ದೇವಿಪ್ರಸಾದ್ ಶೆಟ್ಟಿ ಬೆಳಪು ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ನೂತನ ಅಧ್ಯಕ್ಷರಿಗೆ ನಿಕಟಪೂರ್ವ ಅಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ ರವರು ಅಧಿಕಾರ ಹಸ್ತಾಂತರಗೈದರು, ಕಂಬಳ ಸಮಿತಿಯ ನೂತನ ಕಾರ್ಯಾ ಧ್ಯಕ್ಷರಾಗಿ ಪ್ರೊ| ಗುಣಪಾಲ ಕಡಂಬ, ಪ್ರಧಾನ ಕಾರ್ಯದರ್ಶಿಯಾಗಿ ಲೊಕೇಶ್‌ ಶೆಟ್ಟಿ ಮುಚ್ಚೂರು ಹಾಗೂ ಕೋಶಾಧಿಕಾರಿಯಾಗಿ ಚಂದ್ರಹಾಸ ಸಾಧು ಸನಿಲ್, ತೀರ್ಪುಗಾರರ ಸಂಚಾಲಕರಾಗಿ ವಿಜಯ ಕುಮಾರ್ ಕಂಗಿನಮನೆ ಆಯ್ಕೆಯಾಗಿದ್ದಾರೆ. ನವೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳದ ಪೂರ್ವ ತಯಾರಿಯ ಬಗೆಗೆ ಶಾಸಕ ಅಶೋಕ್ ಕುಮಾರ್ ರೈ ಮಾಹಿತಿಯಿತ್ತರು. ಕಂಬಳದ ಸೊಬಗನ್ನು ರಾಜ್ಯ ರಾಜಧಾನಿಯಲ್ಲಿ ಪಸರಿಸಲು ಎಲ್ಲರ ಬೆಂಬಲವನ್ನು ಕೋರಿದರು.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss