ಸುರತ್ಕಲ್:ರಾಷ್ಟ್ರೀಯ ಹೆದ್ದಾರಿ 66ರ ಕುಳಾಯಿಯಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಮಹಿಳೆ ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಕುಳಾಯಿಯ ವೈನ್‌ಝನ್ ಮಳಿಗೆಯಲ್ಲಿ ಕೆಲಸ ನಿರ್ವಹಿಸುತ್ತಿ ಉತ್ತರ ಕರ್ನಾಟಕ ಗದಗ ಮೂಲದ ಗಂಗವ್ವ ವಗ್ಗರ (47) ಎಂದು ಗುರುತಿಸಲಾಗಿದೆ. ಗಂಗವ್ವ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ಸಂದರ್ಭ ಫ್ರಾನ್ಸಿಸ್ ಎಂಬವರು ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಅವರನ್ನು, ಕೂಡಲೇ ಸಾರ್ವಜನಿಕರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾರು ವಶಕ್ಕೆ ಪಡೆದುಕೊಂಡು ಚಾಲಕ ಫ್ರಾನ್ಸಿಸ್ ವಿರುದ್ಧ ಪ್ರಕರ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
©2021 Tulunada Surya | Developed by CuriousLabs