Tuesday, July 16, 2024
spot_img
More

  Latest Posts

  ಕುತ್ತಾರು ಕೊರಗಜ್ಜನ ಸನ್ನಿಧಿಗೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿದ ಡಿಂಪಲ್ ಬೆಡಗಿ ರಚಿತಾರಾಮ್

  ಮಂಗಳೂರು:  ಕನ್ನಡದ ಖ್ಯಾತ ನಟಿ ರಚಿತಾ ರಾಮ್ ಅವರು ಇಂದು ಕೊರಗಜ್ಜನ ಆದಿಸ್ಥಳ ಕುತ್ತಾರಿಗೆ ಆಗಮಿಸಿ ಕೊರಗಜ್ಜನ ದರ್ಶನ ಪಡೆದರು.

  ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ ಹೇಳಿದ್ರು ಹಾಗಾಗಿ ನನಗೂ ಇಲ್ಲಿಗೆ ಬರಬೇಕು ಅನ್ನಿಸಿತು, ಬಂದ್ಬಿಟ್ಟೆ. ಕೊರಗಜ್ಜನ‌ ಕ್ಷೇತ್ರವು ಪ್ರಾಕೃತಿಕ ಸೌಂದರ್ಯವನ್ನೊಳಗೊಂಡಿದ್ದು ತುಂಬಾ ಚೆನ್ನಾಗಿದೆ.

  ನಾನು ಮೊದಲನೇ ಬಾರಿಗೆ ಇಲ್ಲಿಗೆ ಬಂದಿದ್ದು, ತುಂಬಾ ಖುಷಿ ಆಗಿದೆ ಎಂದರು. ಮುಂದಿನ ಜೂನ್ ತಿಂಗಳಲ್ಲಿ ತೆರೆ ಕಾಣಲಿರುವ ಮ್ಯಾಟ್ನಿ ಮತ್ತು ಬ್ಯಾಡ್ ಮ್ಯಾನರ್ಸ್ ಚಿತ್ರಗಳು ಯಶಸ್ಸು ಕಾಣಲಿ ಎಂದು ಕೊರಗಜ್ಜನಲ್ಲಿ ಪ್ರಾರ್ಥಿಸಿದೆ ಎಂದು ರಚಿತಾರಾಮ್ ಹೇಳಿದರು.

  ಕೊರಗಜ್ಜನ ಆದಿ ಕ್ಷೇತ್ರದ ವತಿಯಿಂದ ರಚಿತಾ ರಾಮ್ ಅವರನ್ನ ಶಾಲು ಹೊದಿಸಿ ಅಭಿನಂದಿಸಲಾಯಿತು.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss