ಮಂಗಳೂರು: ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ನೀಡಲ್ಪಡುವ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ವಿವಿಧ ಕ್ಷೇತ್ರದ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಕರಾವಳಿಯಿಂದ ಪ್ರತಿಷ್ಠಿತ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷರಾದ ಶ್ರೀ ಯೋಗಿಶ್ ಶೆಟ್ಟಿ ಜೆಪ್ಪುರವರು ಆಯ್ಕೆಯಾಗಿದ್ದರೆ.
ಈ ನಿಟ್ಟಿನಲ್ಲಿ ತುಳುನಾಡಿನ ಜನಪ್ರಿಯ ಸಂಘಟನೆಯಾದ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರು ಪ್ರತಿಷ್ಠಿತ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿವುದು ತುಳುನಾಡಿನ ಜನತೆ ಪ್ರಸಂಸಿದ್ದಾರೆ.
ತುಳುನಾಡ ರಕ್ಷಣಾ ವೇದಿಕೆಯು ಸ್ಥಾಪಕಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ನೇತೃತ್ವದಲ್ಲಿ ಕಳೆದ 14 ವರ್ಷಗಳಿಂದ ನಿರಂತರವಾಗಿ ತುಳುನಾಡಿನ ನೆಲ, ಜಲ ಹಾಗೂ ತುಳುನಾಡಿನ ಆಚಾರ ವಿಚಾರ, ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆ ಹಾಗೂ ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿಸಬೇಕೆಂಬ ಆಗ್ರಹವನ್ನು ಕಾನೂನು ರೀತಿಯಲ್ಲಿ ಹೋರಾಟ (ಪ್ರತಿಭಟನೆ, ಧರಣಿ, ಉಪವಾಸ ಸತ್ಯಾಗ್ರಹ) ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಜನರಲ್ಲಿ ಅರಿವು ಮೂಡಿಸುತ್ತ ನಿರಂತರವಾಗಿ ನಡೆಸುತ್ತ ಬರುತ್ತಿದೆ.
ಸಂಘಟನೆಯು ತುಳು ಲಿಪಿಯ ಪ್ರಚಾರ, ತುಳುನಾಡಿನ ಪರಂಪರೆ, ಸಂಸ್ಕೃತಿಯನ್ನು ಜಗತ್ತಿನ ಜನರಿಗೆ ಪರಿಚಯಿಸುವ ದೃಷ್ಠಿಯಿಂದ 2019ರಲ್ಲಿ ಮಂಗಳೂರಿನಲ್ಲಿ 3 ದಿನಗಳ ತೌಳವ ಉಚ್ಛಯ ಎಂಬ ವಿಶ್ವ ತುಳುವರ ಸಮ್ಮಿಲನ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲಿ ವಿಚಾರ ಸಂಕಿರಣ, ಸಂಗೀತ, ನೃತ್ಯ ನಾಟಕ ತುಳು ಸಿನಿಮಾಗೆ ಸಂಬಂಧಿಸಿದ ಮನರಂಜನೆ ಕಾರ್ಯಕ್ರಮಗಳು ನಡೆದೆವು. ಹಾಗೂ ಜಗತ್ತಿನ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿದ ತುಳುವರನ್ನು ತೌಳವ ಪ್ರಶಸ್ತಿ ನೀಡುವ ಮೂಲಕ ಗೌರವಿಸಲಾಯಿತು. 2021 ರಲ್ಲಿ ವಿಶ್ವದ್ಯಾದಂತ ಕೊರೊನಾ 2ನೇ ಅಲೆಯ ರಣಕೇಕೆ ವೇಳೆ ಕರ್ನಾಟಕ ಲೌಕ್‌ಡೌನ್ ಆದ ಸಂದರ್ಭದಲ್ಲಿ ಮಂಗಳೂರಿನಲ್ಲಿ ನಿರಂತರವಾಗಿ 62 ದಿನಗಳ ಕಾಲ ಕೂಲಿ ಕಾರ್ಮಿಕರು ನಿರ್ಗತಿಕರಿಗೆ ಅನ್ನದಾನ ಸೇವೆ ಮಾಡಿದ ಕೀರ್ತಿ ಸಂಘಟನೆಗೆ ಸಲ್ಲುತ್ತದೆ. ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು 2020 ರಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರಿಗೆ ತುಳುನಾಡಿಗೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಯುವ ಸಾಧಕ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿತ್ತು. ಇದೀಗ ಪ್ರತಿಷ್ಠಿತ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದರೆ.
